AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಅಶ್ವಿನ್ ಅನ್​ಸೋಲ್ಡ್

ILT20: ಇಂಟರ್ನ್ಯಾಷನಲ್ ಲೀಗ್ ಟಿ20 ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಟೂರ್ನಿ. ದುಬೈನಲ್ಲಿ ನಡೆಯುವ ಈ ಲೀಗ್‌ಗಾಗಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರು ನೋಂದಣಿ ಮಾಡಿಕೊಂಡಿಸದ್ದರು. ಆದರೀಗ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ.

ಝಾಹಿರ್ ಯೂಸುಫ್
|

Updated on: Oct 02, 2025 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್ ಬೈ ಹೇಳಿ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ನಿರಾಸೆಯಾಗಿದೆ. ಅದು ಕೂಡ ಅನ್​ಸೋಲ್ಡ್ ಆಗುವ ಮೂಲಕ.

1 / 5
ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

2 / 5
ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್​ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್​ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

3 / 5
ಇದರೊಂದಿಗೆ ಇಂಟರ್​ನ್ಯಾಷನಲ್ ಲೀಗ್​ ಟಿ20 (ILT20) ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

4 / 5
ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್​ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್​ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ

ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ