- TV9 Kannada Kannada News Photos Cricket Photos Ravichandran Ashwin went unsold in ILT20 2026 auction
1 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಅಶ್ವಿನ್ ಅನ್ಸೋಲ್ಡ್
ILT20: ಇಂಟರ್ನ್ಯಾಷನಲ್ ಲೀಗ್ ಟಿ20 ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಟೂರ್ನಿ. ದುಬೈನಲ್ಲಿ ನಡೆಯುವ ಈ ಲೀಗ್‌ಗಾಗಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರು ನೋಂದಣಿ ಮಾಡಿಕೊಂಡಿಸದ್ದರು. ಆದರೀಗ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ.
Updated on: Oct 02, 2025 | 8:08 AM

ಇಂಡಿಯನ್ ಪ್ರೀಮಿಯರ್ ಲೀಗ್ಗೆ ಗುಡ್ ಬೈ ಹೇಳಿ ಇಂಟರ್ನ್ಯಾಷನಲ್ ಲೀಗ್ ಟಿ20 (ILT20) ಲೀಗ್ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ಗೆ ನಿರಾಸೆಯಾಗಿದೆ. ಅದು ಕೂಡ ಅನ್ಸೋಲ್ಡ್ ಆಗುವ ಮೂಲಕ.

ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದರು. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು ಮೊತ್ತ ಬರೋಬ್ಬರಿ 1.06 ಕೋಟಿ ರೂ. ಆಗಿತ್ತು.

ಬುಧವಾರ ದುಬೈನಲ್ಲಿ ನಡೆದ ಹರಾಜಿನಲ್ಲಿ 1.06 ಕೋಟಿ ರೂ. ನೀಡಿ ಅಶ್ವಿನ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ. ಅಲ್ಲದೆ ಮೊದಲ ಸುತ್ತಿನಲ್ಲೇ ಅವರು ಅನ್ಸೋಲ್ಡ್ ಆಗಿ ಉಳಿದರು. ಇದಾಗ್ಯೂ ಕೊನೆಯ ಸುತ್ತಿನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದ ಅಶ್ವಿನ್ ಅವರನ್ನು ಯಾವುದೇ ಫ್ರಾಂಚೈಸಿ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.

ಇದರೊಂದಿಗೆ ಇಂಟರ್ನ್ಯಾಷನಲ್ ಲೀಗ್ ಟಿ20 (ILT20) ಲೀಗ್ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ರವಿಚಂದ್ರನ್ ಅಶ್ವಿನ್ ಅವರ ಕನಸು ಕಮರಿದೆ. ಇದಾಗ್ಯೂ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್ ಲೀಗ್ನಲ್ಲಿ ಅಶ್ವಿನ್ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ.

ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು. ಇದೇ ಕಾರಣದಿಂದಾಗಿ ಇಂಟರ್ನ್ಯಾಷನಲ್ ಲೀಗ್ ಹರಾಜಿನಲ್ಲಿ ಅವರು ಗರಿಷ್ಠ ಮೂಲ ಬೆಲೆ ಘೋಷಿಸಿದ್ದರು. ಆದರೆ ಬೃಹತ್ ಮೊತ್ಗ ನೀಡಿ ಹಿರಿಯ ಸ್ಪಿನ್ನರ್ನ ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬಂದಿಲ್ಲ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



