Ravindra Jadeja: 30 ವರ್ಷಗಳ ಹಳೆಯ ದಾಖಲೆ ಮುರಿದ ರವೀಂದ್ರ ಜಡೇಜಾ

Ravindra Jadeja Records: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕುಲ್ದೀಪ್ ಯಾದವ್ 4 ವಿಕೆಟ್ ಕಬಳಿಸಿದರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದು ಮಿಂಚಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Jul 27, 2023 | 10:10 PM

India vs West Indies: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂರು ವಿಕೆಟ್​ಗಳೊಂದಿಗೆ ಜಡೇಜಾ 30 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

1 / 6
ಹೌದು, ಈ 3 ವಿಕೆಟ್​ಗಳೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್​ ಕಬಳಿಸಿದ ಟೀಮ್ ಇಂಡಿಯಾ ಬೌಲರ್​ ಎಂಬ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಈ ದಾಖಲೆ ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೆಸರಿನಲ್ಲಿತ್ತು. ಕಪಿಲ್ ದೇವ್ ವೆಸ್ಟ್ ಇಂಡೀಸ್ ವಿರುದ್ಧ 42 ಪಂದ್ಯಗಳಿಂದ 43 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು.

3 / 6
ಇನ್ನು ಅನಿಲ್ ಕುಂಬ್ಳೆ ವೆಸ್ಟ್ ಇಂಡೀಸ್ ವಿರುದ್ಧ 26 ಏಕದಿನ ಪಂದ್ಯಗಳಿಂದ 41 ವಿಕೆಟ್ ಕಬಳಿಸಿ ಈ ದಾಖಲೆಯ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರು.

4 / 6
ಇದೀಗ ವಿಂಡೀಸ್ ವಿರುದ್ಧ 30 ಏಕದಿನ ಪಂದ್ಯಗಳಿಂದ 44 ವಿಕೆಟ್ ಕಬಳಿಸುವ ಮೂಲಕ ರವೀಂದ್ರ ಜಡೇಜಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ 30 ವರ್ಷಗಳಿಂದ ಕಪಿಲ್ ದೇವ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಜಡೇಜಾ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಕುಲ್ದೀಪ್ ಯಾದವ್ (4 ವಿಕೆಟ್) ಹಾಗೂ ರವೀಂದ್ರ ಜಡೇಜಾ (3 ವಿಕೆಟ್) ಸ್ಪಿನ್ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡವು 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು.

6 / 6
Follow us