Updated on: Jul 27, 2023 | 10:10 PM
India vs West Indies: ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂರು ವಿಕೆಟ್ಗಳೊಂದಿಗೆ ಜಡೇಜಾ 30 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
ಹೌದು, ಈ 3 ವಿಕೆಟ್ಗಳೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ಬೌಲರ್ ಎಂಬ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೆಸರಿನಲ್ಲಿತ್ತು. ಕಪಿಲ್ ದೇವ್ ವೆಸ್ಟ್ ಇಂಡೀಸ್ ವಿರುದ್ಧ 42 ಪಂದ್ಯಗಳಿಂದ 43 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು.
ಇನ್ನು ಅನಿಲ್ ಕುಂಬ್ಳೆ ವೆಸ್ಟ್ ಇಂಡೀಸ್ ವಿರುದ್ಧ 26 ಏಕದಿನ ಪಂದ್ಯಗಳಿಂದ 41 ವಿಕೆಟ್ ಕಬಳಿಸಿ ಈ ದಾಖಲೆಯ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರು.
ಇದೀಗ ವಿಂಡೀಸ್ ವಿರುದ್ಧ 30 ಏಕದಿನ ಪಂದ್ಯಗಳಿಂದ 44 ವಿಕೆಟ್ ಕಬಳಿಸುವ ಮೂಲಕ ರವೀಂದ್ರ ಜಡೇಜಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ 30 ವರ್ಷಗಳಿಂದ ಕಪಿಲ್ ದೇವ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಜಡೇಜಾ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಕುಲ್ದೀಪ್ ಯಾದವ್ (4 ವಿಕೆಟ್) ಹಾಗೂ ರವೀಂದ್ರ ಜಡೇಜಾ (3 ವಿಕೆಟ್) ಸ್ಪಿನ್ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡವು 23 ಓವರ್ಗಳಲ್ಲಿ ಕೇವಲ 114 ರನ್ಗಳಿಗೆ ಆಲೌಟ್ ಆಯಿತು.