IND vs ENG: ರವೀಂದ್ರ ಜಡೇಜಾ ಬದಲಿ ಆಟಗಾರ ಯಾರು?

| Updated By: ಪೃಥ್ವಿಶಂಕರ

Updated on: Jan 29, 2024 | 5:07 PM

India vs England Test: ಮೊದಲ ಟೆಸ್ಟ್ ಪಂದ್ಯದಲ್ಲಿ 28 ರನ್​ಗಳಿಂದ ಸೋತಿರುವ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಐದು ಪಂದ್ಯಗಳ ಸರಣಿಯ ಈ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ.

1 / 7
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ.

2 / 7
ಹೀಗಾಗಿ ಫೆಬ್ರವರಿ 2 ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಉತ್ತರ ಎಡಗೈ ಸ್ಪಿನ್ನರ್​ ಕುಲ್ದೀಪ್ ಯಾದವ್.

3 / 7
ಏಕೆಂದರೆ ವಿಶಾಖಪಟ್ಟಣದ ಡಾ.ವೈಎಸ್ ರಾಜಶೇಖರ ರೆಡ್ಡಿ ಮೈದಾನದ ಪಿಚ್​ ಸ್ಪಿನ್ನರ್​ಗಳಿಗೆ ಸಹಕಾರಿ. ಇತ್ತ ಕುಲ್ದೀಪ್ ಯಾದವ್ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದಲ್ಲಿ ಬದಲಿ ಸ್ಪಿನ್ ಬೌಲರ್​ ಅಥವಾ ಆಲ್​ರೌಂಡರ್ ಇಲ್ಲ. ಹೀಗಾಗಿ ಕುಲ್ದೀಪ್ ಯಾದವ್ ಅವರೇ ಭಾರತ ತಂಡದ ಮುಂದಿರುವ ಆಯ್ಕೆ.

4 / 7
ಇನ್ನು ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಮುನ್ನ ರವೀಂದ್ರ ಜಡೇಜಾ ಅವರ ಬದಲಿ ಆಟಗಾರನನ್ನು ಆಯ್ಕೆ ಮಾಡಿದರೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್​ ನೀಡುವುದು ಕೂಡ ಅನುಮಾನ. ಏಕೆಂದರೆ ಸ್ಪಿನ್ ಸ್ನೇಹಿ ಪಿಚ್​ನಲ್ಲಿ ಆಲ್​ರೌಂಡರ್​ಗಳಾದ ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್​ ಜೊತೆ ಪರಿಪೂರ್ಣ ಸ್ಪಿನ್ನರ್​ ಒಬ್ಬರನ್ನು ಟೀಮ್ ಇಂಡಿಯಾ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

5 / 7
ಅದರಂತೆ ರವೀಂದ್ರ ಜಡೇಜಾ ಬದಲಿಗೆ ಕುಲ್ದೀಪ್ ಯಾದವ್ ದ್ವಿತೀಯ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಈ ಒಂದು ಬದಲಾವಣೆಯೊಂದಿಗೆ ಭಾರತ ತಂಡ ದ್ವಿತೀಯ ಟೆಸ್ಟ್​ನಲ್ಲಿ ಕಣಕ್ಕಿಳಿಯಬಹುದು.

6 / 7
ಟೀಮ್ ಇಂಡಿಯಾ ಪರ ಇದುವರೆಗೆ ಕೇವಲ 8 ಟೆಸ್ಟ್ ಪಂದ್ಯಗಳನ್ನಾಡಿರುವ ಕುಲ್ದೀಪ್ ಯಾದವ್ ಒಟ್ಟು 34 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ 2022 ರಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್​​ನಲ್ಲಿ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.

7 / 7
ಭಾರತ ಟೆಸ್ಟ್ ತಂಡ (2ನೇ ಟೆಸ್ಟ್​ಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

Published On - 1:59 pm, Mon, 29 January 24