AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಜಡ್ಡು ಜಾದೂ…ರೂಟ್ ಕ್ಲಿಯರ್ ದಾಖಲೆ

Ravindra Jadeja Records: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Edited By: |

Updated on: Jan 28, 2024 | 9:58 AM

Share
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ರವೀಂದ್ರ ಜಡೇಜಾ (Ravindra Jadeja) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳಲ್ಲಿ ರೂಟ್ ಕ್ಲಿಯರ್ ರೆಕಾರ್ಡ್ ಕೂಡ ಸೇರಿದೆ.

1 / 6
ಅಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಜೋ ರೂಟ್ ಅವರನ್ನು ಅತ್ಯಧಿಕ ಬಾರಿ ಔಟ್ ಮಾಡಿದ ವಿಶೇಷ ದಾಖಲೆ ಇದೀಗ ರವೀಂದ್ರ ಜಡೇಜಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿತ್ತು.

2 / 6
ಟೆಸ್ಟ್ ಕ್ರಿಕೆಟ್​ನ ಅತ್ಯುತ್ತಮ ಬ್ಯಾಟರ್​ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಜೋ ರೂಟ್ ಅವರನ್ನು ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಒಟ್ಟು 8 ಬಾರಿ ಔಟ್ ಮಾಡಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಜಡ್ಡು ಅಳಿಸಿ ಹಾಕಿದ್ದಾರೆ.

3 / 6
ಹೈದರಾಬಾದ್​ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೋ ರೂಟ್ (29) ಅವರನ್ನು ಜಡೇಜಾ ಔಟ್ ಮಾಡಿದ್ದಾರೆ. ಇದರೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ರೂಟ್ ಅವರನ್ನು ಅತ್ಯಧಿಕ ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆ ಜಡೇಜಾ ಪಾಲಾಯಿತು.

4 / 6
ರವೀಂದ್ರ ಜಡೇಜಾ ಇದುವರೆಗೆ 9 ಬಾರಿ ಜೋ ರೂಟ್​ಗೆ ಪೆವಿಲಿಯನ್ ಹಾದಿ ತೋರಿಸಿದ್ದಾರೆ. ಈ ಮೂಲಕ ರೂಟ್ ವಿರುದ್ಧ ಅತ್ಯಂತ ಯಶಸ್ವಿ ಬೌಲರ್​ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550+ ವಿಕೆಟ್ ಪಡೆದ ವಿಶೇಷ ಸಾಧಕರ ಪಟ್ಟಿಗೂ ಜಡೇಜಾ ಸೇರ್ಪಡೆಯಾಗಿದ್ದಾರೆ.

5 / 6
ಈ ಸಾಧನೆ ಮಾಡಿದ ಭಾರತದ 7ನೇ ಬೌಲರ್ ಎಂಬ ಹಿರಿಮೆಗೆ ಜಡೇಜಾ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ  ಅನಿಲ್ ಕುಂಬ್ಳೆ, ಕಪಿಲ್ ದೇವ್, ಝಹೀರ್ ಖಾನ್, ಹರ್ಭಜನ್ ಸಿಂಗ್, ಜಾವಗಲ್ ಶ್ರೀನಾಥ್ ಮತ್ತು ರವಿಚಂದ್ರನ್ ಅಶ್ವಿನ್ ಈ ಸಾಧನೆ ಮಾಡಿದ್ದರು. ಇದೀಗ 550+ ವಿಕೆಟ್​ಗಳೊಂದಿಗೆ ಈ ಸಾಧಕರ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಕೂಡ ಕಾಣಿಸಿಕೊಂಡಿದ್ದಾರೆ.

6 / 6
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!