AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಜಹೀರ್ ಖಾನ್​ರನ್ನು ಹಿಂದಿಕ್ಕಿದ ರವೀಂದ್ರ ಜಡೇಜಾ

Ravindra Jadeja Surpasses Zaheer Khan: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರವೀಂದ್ರ ಜಡೇಜಾ ಅವರು ಜಹೀರ್ ಖಾನ್ ಅವರ ದಾಖಲೆಯನ್ನು ಮುರಿದಿದ್ದಾರೆ. ಲಾರ್ಡ್ಸ್‌ನಲ್ಲಿ ಒಂದು ವಿಕೆಟ್ ಪಡೆದು ಅವರು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ಪ್ರವಾಸದಲ್ಲಿ ಜಡೇಜಾ ಬೌಲಿಂಗ್‌ನಲ್ಲಿ ಅಷ್ಟೊಂದು ಉತ್ತಮ ಪ್ರದರ್ಶನ ನೀಡದಿದ್ದರೂ, ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

ಪೃಥ್ವಿಶಂಕರ
|

Updated on: Jul 11, 2025 | 8:52 PM

Share
ಇಂಗ್ಲೆಂಡ್‌ ಪ್ರವಾಸದಲ್ಲಿ ಟೀಂ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ತಮ್ಮ ಬೌಲಿಂಗ್​ನಲ್ಲಿ ಒಳ್ಳೇಯ ಪ್ರದರ್ಶನ ನೀಡದಿರಬಹುದು. ಆದರೆ ಬ್ಯಾಟಿಂಗ್​ನಲ್ಲಿ ತಂಡಕ್ಕೆ ಅವಶ್ಯಕವಿದ್ದಾಗ ಉತ್ತಮ ಕೊಡುಗೆ ನೀಡಿದ್ದಾರೆ. ಅಲ್ಲದೆ ಅರ್ಧಶತಕಗಳ ಇನ್ನಿಂಗ್ಸ್ ಕೂಡ ಆಡಿದ್ದಾರೆ.

1 / 6
ಇದೀಗ ಲಾರ್ಡ್ಸ್‌ನಲ್ಲಿ ನಡೆಯತ್ತಿರುವ ಮೂರನೇ ಟೆಸ್ಟ್​ ಪಂದ್ಯದಲ್ಲಿ 12 ಓವರ್ ಬೌಲ್ ಮಾಡಿದ ರವೀಂದ್ರ ಜಡೇಜಾ 29 ರನ್ ನೀಡಿ 1 ವಿಕೆಟ್ ಕೂಡ ಪಡೆದರು. ಓಲಿ ಪೋಪ್ ಅವರ ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟೀಂ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಅವರ ದಾಖಲೆಯನ್ನು ಮುರಿದಿದ್ದಾರೆ.

2 / 6
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಪಡೆಯುವ ಮೂಲಕ, ರವೀಂದ್ರ ಜಡೇಜಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಜಹೀರ್ ಖಾನ್ ಅವರನ್ನು ಹಿಂದಿಕ್ಕಿದ್ದಾರೆ.

3 / 6
ಜಡೇಜಾ ಈಗ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 611 ವಿಕೆಟ್‌ಗಳನ್ನು ಕಬಳಿಸಿದ್ದರೆ, ಮಾಜಿ ವೇಗಿ ಜಹೀರ್ ಖಾನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 610 ವಿಕೆಟ್‌ಗಳನ್ನು ಪಡೆದಿದ್ದರು. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಅನಿಲ್ ಕುಂಬ್ಳೆ ಭಾರತದ ಪರ 956 ವಿಕೆಟ್‌ ಉರುಳಿಸಿದ್ದಾರೆ.

4 / 6
2012 ರಲ್ಲಿ ಇದೇ ಇಂಗ್ಲೆಂಡ್ ವಿರುದ್ಧ ಭಾರತೀಯ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ 
ರವೀಂದ್ರ ಜಡೇಜಾ ಇದುವರೆಗೆ 83 ಟೆಸ್ಟ್ ಪಂದ್ಯಗಳನ್ನಾಡಿದ್ದು ಒಟ್ಟು 3564 ರನ್‌ಗಳನ್ನು ಗಳಿಸಿದ್ದಾರೆ. ಇದಲ್ಲದೆ, ಅವರು 326 ವಿಕೆಟ್‌ಗಳನ್ನು ಕೂಡ ಕಬಳಿಸಿದ್ದಾರೆ.

2012 ರಲ್ಲಿ ಇದೇ ಇಂಗ್ಲೆಂಡ್ ವಿರುದ್ಧ ಭಾರತೀಯ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ ರವೀಂದ್ರ ಜಡೇಜಾ ಇದುವರೆಗೆ 83 ಟೆಸ್ಟ್ ಪಂದ್ಯಗಳನ್ನಾಡಿದ್ದು ಒಟ್ಟು 3564 ರನ್‌ಗಳನ್ನು ಗಳಿಸಿದ್ದಾರೆ. ಇದಲ್ಲದೆ, ಅವರು 326 ವಿಕೆಟ್‌ಗಳನ್ನು ಕೂಡ ಕಬಳಿಸಿದ್ದಾರೆ.

5 / 6
ಏಕದಿನ ಕ್ರಿಕೆಟ್‌ನಲ್ಲಿ 231 ವಿಕೆಟ್‌ಗಳನ್ನು ಉರುಳಿಸಿರುವ ಜಡೇಜಾ, ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 54 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅಲ್ಲದೆ ಭಾರತ ಗೆದ್ದಿರುವ 2024 ರ ಟಿ20 ವಿಶ್ವಕಪ್ ಮತ್ತು 2025 ರ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಭಾಗವಾಗಿದ್ದರು.

6 / 6