AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಒಂದೇ ದಿನ ಅಬ್ಬರಿಸಿದ ಆರ್​ಸಿಬಿಯ 6 ಹುಲಿಗಳು; ಅಭಿಮಾನಿಗಳಿಗೆ ಹಬ್ಬವೋ ಹಬ್ಬ

RCB Stars Shine: ನವೆಂಬರ್ 30 ರ ಭಾನುವಾರ ಆರ್‌ಸಿಬಿ ಅಭಿಮಾನಿಗಳಿಗೆ ಸುವರ್ಣ ದಿನವಾಗಿತ್ತು. ಆರು ಆರ್‌ಸಿಬಿ ಆಟಗಾರರು ತಮ್ಮ ಕ್ರಿಕೆಟ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿ, ತಂಡಗಳ ಗೆಲುವಿಗೆ ಕಾರಣರಾದರು. ವಿರಾಟ್ ಕೊಹ್ಲಿ ಶತಕ ಸಿಡಿಸಿದರೆ, ರಜತ್ ಪಾಟಿದಾರ್ ಮತ್ತು ಜಿತೇಶ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಅಬುಧಾಬಿ T10 ಲೀಗ್‌ನಲ್ಲಿ ಫಿಲ್ ಸಾಲ್ಟ್, ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್ ಸಹ ಮಿಂಚಿದರು.

ಪೃಥ್ವಿಶಂಕರ
|

Updated on: Dec 01, 2025 | 5:48 PM

Share
ನವೆಂಬರ್ 30 ರ ಭಾನುವಾರ ಆರ್​ಸಿಬಿ ಅಭಿಮಾನಿಗಳ ಪಾಲಿಗೆ ಶುಭ ಸಂಡೆಯಾಗಿತ್ತು. ಏಕೆಂದರೆ ಈ ದಿನದಂದು  ನಡೆದ ಕ್ರಿಕೆಟ್ ಪಂದ್ಯಗಳಲ್ಲಿ ಆರ್​ಸಿಬಿ ಆರು ಆಟಗಾರರು ಮಿಂಚಿನ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ತಂಡದ ಗೆಲುವಿನ ರೂವಾರಿಗಳಾಗಿದ್ದಾರೆ. ಹಾಗಿದ್ದರೆ ಆ 6 ಆಟಗಾರರು ಯಾರು? ಯಾವ್ಯಾವ ಪಂದ್ಯಗಳನ್ನು ಆಡಿದ್ದರು ಎಂಬುದರ ವಿವರ ಇಲ್ಲಿದೆ.

1 / 5
ಮೊದಲಿಗೆ ದಕ್ಷಿಣ ಆಫ್ರಿಕಾ ವಿರುದ್ಧ ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆರ್​ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ ಸಿಡಿಲಬ್ಬರದ ಶತಕ ಸಿಡಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೊಹ್ಲಿ ಕೇವಲ 120 ಎಸೆತಗಳಲ್ಲಿ 11 ಬೌಂಡರಿ ಮತ್ತು 7 ಸಿಕ್ಸರ್‌ಗಳ ಸಹಿತ 135 ರನ್ ಬಾರಿಸಿದರು. ಹಾಗೆಯೇ ರೋಹಿತ್ ಶರ್ಮಾ ಅವರೊಂದಿಗೆ ಶತಕದ ಪಾಲುದಾರಿಕೆ ನಡೆಸಿ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದರು.

2 / 5
ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ದೇಶಿ ಟೂರ್ನಿ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಆರ್​ಸಿಬಿ ನಾಯಕನಾಗಿರುವ ರಜತ್ ಪಾಟಿದರ್, ಮಧ್ಯಪ್ರದೇಶ ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು. ಕೇವಲ 20 ಎಸೆತಗಳಲ್ಲಿ 43 ರನ್ ಚಚ್ಚಿದ ರಜತ್ ತಂಡದ ಗೆಲುವಿಗೆ ಕಾರಣರಾಗಿದ್ದಲದೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

3 / 5
ಇದೇ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ವಿದರ್ಭ ತಂಡದ ಪರ ಕಣಕ್ಕಿಳಿದಿದ್ದ ಆರ್​ಸಿಬಿಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ 19 ಎಸೆತಗಳಲ್ಲಿ 41 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಜಿತೇಶ್ ಅವರ ಈ ಆಟಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.

4 / 5
ಇನ್ನು ಅಬುದಾಬಿಯಲ್ಲಿ ನಡೆದ ಅಬುದಾಬಿ ಟಿ10 ಲೀಗ್​ನಲ್ಲಿ ಯುಎಇ ಬುಲ್ಸ್ ತಂಡದ ಪರ ಆಡಿದ್ದ ಆರ್​ಸಿಬಿಯ ಮೂರು ಆಟಗಾರರಾದ ಫಿಲ್ ಸಾಲ್ಟ್, ಟಿಮ್ ಡೇವಿಡ್ ಹಾಗೂ ರೊಮಾರಿಯೊ ಶೆಫರ್ಡ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾದರು. ಸಾಲ್ಟ್ 8 ಎಸೆತಗಳಲ್ಲಿ 18 ರನ್ ಬಾರಿಸಿದರೆ, ಟಿಮ್ ಡೇವಿಡ್ ಕೇವಲ 30 ಎಸೆತಗಳಲ್ಲಿ 98 ರನ್ ಚಚ್ಚಿದರು. ಶೆಫರ್ಡ್​ಗೆ ಬ್ಯಾಟಿಂಗ್ ಹಾಗೂ ಬೌಲಿಂಗ್​ ಮಾಡುವ ಅವಕಾಶ ಸಿಗಲಿಲ್ಲ. ಆದಾಗ್ಯೂ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ