AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Final: ಸತತ 2ನೇ ಟ್ರೋಫಿ; ಸಿಎಸ್​​ಕೆ, ಮುಂಬೈ ದಾಖಲೆ ಸರಿಗಟ್ಟಿದ ಆರ್​ಸಿಬಿ

RCB Crowned 2026 IPL Champions: 2026ರ ಐಪಿಎಲ್ ಫೈನಲ್‌ನಲ್ಲಿ ರಜತ್ ಪಾಟಿದಾರ್ ನಾಯಕತ್ವದ RCB, ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಐಪಿಎಲ್ ಪ್ರಶಸ್ತಿ ಗೆದ್ದಿದೆ. ವಿರಾಟ್ ಕೊಹ್ಲಿಯವರ ಅಜೇಯ 75 ರನ್ ನೆರವಿನಿಂದ RCB 5 ವಿಕೆಟ್ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ, ಚೆನ್ನೈ ಮತ್ತು ಮುಂಬೈ ನಂತರ ಸತತವಾಗಿ ಪ್ರಶಸ್ತಿ ಗೆದ್ದ ಮೂರನೇ ತಂಡ ಎಂಬ ಇತಿಹಾಸವನ್ನು ಆರ್​​ಸಿಬಿ ನಿರ್ಮಿಸಿದೆ.

ಪೃಥ್ವಿಶಂಕರ
|

Updated on:Jun 01, 2026 | 12:55 AM

Share
2026 ರ ಐಪಿಎಲ್ ಫೈನಲ್‌ನಲ್ಲಿ, ರಜತ್ ಪಾಟಿದಾರ್ ನಾಯಕತ್ವದ ಆರ್​ಸಿಬಿ, ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿ ಸತತ ಎರಡನೇ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದರೊಂದಿಗೆ, ಆರ್​ಸಿಬಿ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಗೆದ್ದ ಮೂರನೇ ತಂಡವೆಂಬ ದಾಖಲೆಯನ್ನು ಬರೆಯಿತು (PC-PTI).

1 / 5
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮಾತ್ರ ಸತತ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದವು. ಇದೀಗ ಆರ್‌ಸಿಬಿ ಈ ಎರಡು ತಂಡಗಳ ಪಟ್ಟಿಗೆ ಸೇರ್ಪಡೆಗೊಂಡಿದೆ. 2025ರ ಐಪಿಎಲ್ ಫೈನಲ್​ನಲ್ಲಿ ಪಂಜಾಬ್ ತಂಡವನ್ನು ಮಣಿಸಿ ಚಾಂಪಿಯನ್‌ ಆಗಿದ್ದ ಆರ್​ಸಿಬಿ, ಇದೀಗ ಗುಜರಾತ್ ತಂಡವನ್ನು ಸೋಲಿಸಿ ಟ್ರೋಫಿ ಎತ್ತಿಹಿಡಿದಿದೆ (PC-PTI).

2 / 5
ವಾಸ್ತವವಾಗಿ ಚೆನ್ನೈ ಸೂಪರ್ ಕಿಂಗ್ಸ್ 2010 ಮತ್ತು 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಪ್ರಶಸ್ತಿ ಗೆದ್ದಿತ್ತು. ಹಾಗೆಯೇ ಮುಂಬೈ ಇಂಡಿಯನ್ಸ್ 2019 ಮತ್ತು 2020 ರಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ಈ ಮೂರು ತಂಡಗಳನ್ನು ಹೊರತುಪಡಿಸಿ ಬೇರೆ ಯಾವ ತಂಡವೂ ಸತತ 2 ಬಾರಿ ಟ್ರೋಫಿ ಗೆದ್ದಿಲ್ಲ (PC-IPL X).

3 / 5
ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ತಂಡ ವಾಷಿಂಗ್ಟನ್ ಸುಂದರ್ ಅವರ ಅರ್ಧಶತಕದ ನೆರವಿನಿಂದ 156 ರನ್​ಗಳ ಗುರಿ ನೀಡಿತು (PC-PTI).

4 / 5
ಈ ಗುರಿ ಬೆನ್ನಟ್ಟಿದ ಆರ್​ಸಿಬಿ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕದ ನೆರವಿನಿಂದ 18 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಫೈನಲ್​ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿದ ಕೊಹ್ಲಿ   42 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ ಅಜೇಯ 75 ರನ್ ಬಾರಿಸುವ ಮೂಲಕ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು (PC-PTI).

5 / 5

Published On - 12:35 am, Mon, 1 June 26

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್

ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​

ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ

ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!

ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್

ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ

ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ

ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​