
2026 ರ ಐಪಿಎಲ್ ಫೈನಲ್‌ನಲ್ಲಿ, ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ, ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿ ಸತತ ಎರಡನೇ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದರೊಂದಿಗೆ, ಆರ್‌ಸಿಬಿ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಗೆದ್ದ ಮೂರನೇ ತಂಡವೆಂಬ ದಾಖಲೆಯನ್ನು ಬರೆಯಿತು (PC-PTI).

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮಾತ್ರ ಸತತ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದವು. ಇದೀಗ ಆರ್‌ಸಿಬಿ ಈ ಎರಡು ತಂಡಗಳ ಪಟ್ಟಿಗೆ ಸೇರ್ಪಡೆಗೊಂಡಿದೆ. 2025ರ ಐಪಿಎಲ್ ಫೈನಲ್‌ನಲ್ಲಿ ಪಂಜಾಬ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿದ್ದ ಆರ್‌ಸಿಬಿ, ಇದೀಗ ಗುಜರಾತ್ ತಂಡವನ್ನು ಸೋಲಿಸಿ ಟ್ರೋಫಿ ಎತ್ತಿಹಿಡಿದಿದೆ (PC-PTI).

ವಾಸ್ತವವಾಗಿ ಚೆನ್ನೈ ಸೂಪರ್ ಕಿಂಗ್ಸ್ 2010 ಮತ್ತು 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಪ್ರಶಸ್ತಿ ಗೆದ್ದಿತ್ತು. ಹಾಗೆಯೇ ಮುಂಬೈ ಇಂಡಿಯನ್ಸ್ 2019 ಮತ್ತು 2020 ರಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ಈ ಮೂರು ತಂಡಗಳನ್ನು ಹೊರತುಪಡಿಸಿ ಬೇರೆ ಯಾವ ತಂಡವೂ ಸತತ 2 ಬಾರಿ ಟ್ರೋಫಿ ಗೆದ್ದಿಲ್ಲ (PC-IPL X).

ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ ವಾಷಿಂಗ್ಟನ್ ಸುಂದರ್ ಅವರ ಅರ್ಧಶತಕದ ನೆರವಿನಿಂದ 156 ರನ್ಗಳ ಗುರಿ ನೀಡಿತು (PC-PTI).

ಈ ಗುರಿ ಬೆನ್ನಟ್ಟಿದ ಆರ್‌ಸಿಬಿ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕದ ನೆರವಿನಿಂದ 18 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಫೈನಲ್ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಕೊಹ್ಲಿ 42 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ ಅಜೇಯ 75 ರನ್ ಬಾರಿಸುವ ಮೂಲಕ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು (PC-PTI).
Published On - 12:35 am, Mon, 1 June 26