IPL 2025: RCB ತಂಡಕ್ಕೆ ಮುಂದಿನ 3 ಪಂದ್ಯಗಳೂ ನಿರ್ಣಾಯಕ

Updated on: May 07, 2025 | 11:54 AM

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಆರ್​ಸಿಬಿ, ತನ್ನ ಮುಂದಿನ ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳನ್ನು ಎದುರಿಸಲಿದೆ.

1 / 7
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ 2025ರ 56 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಗುಜರಾತ್ ಟೈಟಾನ್ಸ್ (GT) ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿದೆ.

2 / 7
ಈ ನಾಲ್ಕು ತಂಡಗಳಿಗೆ ಪ್ಲೇಆಫ್​ ಪ್ರವೇಶಿಸಲು ಮುಂದಿನ ಪಂದ್ಯಗಳು ನಿರ್ಣಾಯಕ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಮುಂದಿನ ಮೂರು ಮ್ಯಾಚ್​ಗಳಲ್ಲೂ ಜಯಗಳಿಸಬೇಕು. ಏಕೆಂದರೆ ಅತ್ತ ಗುಜರಾತ್ ಟೈಟಾನ್ಸ್ ತಂಡ ಮುಂದಿನ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಒಟ್ಟು 22 ಅಂಕಗಳನ್ನು ಪಡೆಯಲಿದೆ.

3 / 7
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ 22 ಪಾಯಿಂಟ್ಸ್​ನೊಂದಿಗೆ ಟಾಪ್-1 ಅಥವಾ ಟಾಪ್-2 ನಲ್ಲಿ ಕಾಣಿಸಿಕೊಳ್ಳಬಹುದು. ಒಂದು ವೇಳೆ ಮೂರು ಮ್ಯಾಚ್​ಗಳಲ್ಲಿ ಒಂದು ಸೋಲನುಭವಿಸಿದರೆ ಆರ್​ಸಿಬಿ ತಂಡದ ಪಾಯಿಂಟ್ಸ್​ 20 ರಲ್ಲಿ ಉಳಿಯಲಿದೆ.

4 / 7
ಅತ್ತ ಪಂಜಾಬ್ ಕಿಂಗ್ಸ್ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ಜಯಗಳಿಸಿದರೆ 21 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು. ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎಲಿಮಿನೇಟರ್ ಪಂದ್ಯವನ್ನು ಆಡಬೇಕಾಗಿ ಬರಬಹುದು. 

5 / 7
ಅಂದರೆ ಐಪಿಎಲ್ ಪ್ಲೇಆಫ್ ನಿಯಮದ ಪ್ರಕಾರ, ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ತಲುಪಲಿದೆ. ಇನ್ನು ಸೋತ ತಂಡಕ್ಕೆ ಎರಡನೇ ಕ್ವಾಲಿಫೈಯರ್ ಪಂದ್ಯವಾಡಲು ಅವಕಾಶ ದೊರೆಯುತ್ತದೆ. ಈ ಮ್ಯಾಚ್​ನಲ್ಲಿ ಗೆದ್ದು ಫೈನಲ್​ಗೇರಬಹುದು.

6 / 7
ಹಾಗೆಯೇ ಅಂಕ ಪಟ್ಟಿಯಲ್ಲಿ 3ನೇ ಮತ್ತು 4ನೇ ಸ್ಥಾನಗಳನ್ನು ಅಲಂಕರಿಸುವ ತಂಡಗಳು ಪ್ಲೇಆಫ್​ನಲ್ಲಿ ಎಲಿಮಿನೇಟರ್ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದರೆ ಮಾತ್ರ ಫೈನಲ್​ಗೇರಬಹುದು.

7 / 7
ಅಂದರೆ ಇಲ್ಲಿ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬೇಕಿದ್ದರೆ ಮುಂದಿನ ಮೂರು ಮ್ಯಾಚ್​ಗಳಲ್ಲಿ ಜಯ ಸಾಧಿಸಲೇಬೇಕು. ಈ ಮೂಲಕ ಪ್ಲೇಆಫ್​ನ ಮೊದಲ ಪಂದ್ಯದಲ್ಲೇ ಗೆದ್ದು ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಬಹುದು. ಇನ್ನು ಮೊದಲ ಕ್ವಾಲಿಫೈಯರ್​ನಲ್ಲಿ ಸೋತರೂ ಮತ್ತೊಂದು ಅವಕಾಶ ದೊರೆಯಲಿದೆ. ಈ ಮೂಲಕ ಕೂಡ ಫೈನಲ್​ಗೇರಬಹುದು. ಇಂತಹದೊಂದು ಅವಕಾಶ ಸಿಗಬೇಕಿದ್ದರೆ RCB ತಂಡವು ಮುಂದಿನ 3 ಪಂದ್ಯಗಳಲ್ಲೂ ಜಯ ಸಾಧಿಸಬೇಕು.