IPL 2025: ಹರಾಜಿಗೂ ಮುನ್ನ ಆರ್​ಸಿಬಿ ಉಳಿಸಿಕೊಳ್ಳಬಹುದಾದ ಐವರು ಆಟಗಾರರರು ಇವರೇ..

Updated on: Sep 29, 2024 | 7:22 PM

RCB: ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ನಿಯಮಗಳನ್ನು ಹೊರಡಿಸಿದೆ. ಅದರಂತೆ ಪ್ರತಿ ಫ್ರಾಂಚೈಸಿ ಗರಿಷ್ಠ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು. ಇದರಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಆರ್​ಸಿಬಿ ಫ್ರಾಂಚೈಸಿ ಹರಾಜಿಗೂ ಮುನ್ನ ಯಾವ್ಯಾವ ಆಟಗಾರನನ್ನು ಉಳಿಸಿಕೊಳ್ಳಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

1 / 6
ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ನಿಯಮಗಳನ್ನು ಹೊರಡಿಸಿದೆ. ಅದರಂತೆ ಪ್ರತಿ ಫ್ರಾಂಚೈಸಿ ಗರಿಷ್ಠ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು. ಇದರಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಆರ್​ಸಿಬಿ ಫ್ರಾಂಚೈಸಿ ಹರಾಜಿಗೂ ಮುನ್ನ ಯಾವ್ಯಾವ ಆಟಗಾರನನ್ನು ಉಳಿಸಿಕೊಳ್ಳಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಐಪಿಎಲ್ 2025 ರ ಮೊದಲು ಮೆಗಾ ಹರಾಜು ನಡೆಯಲಿದೆ. ಅದಕ್ಕೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ ನಿಯಮಗಳನ್ನು ಹೊರಡಿಸಿದೆ. ಅದರಂತೆ ಪ್ರತಿ ಫ್ರಾಂಚೈಸಿ ಗರಿಷ್ಠ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು. ಇದರಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಆರ್​ಸಿಬಿ ಫ್ರಾಂಚೈಸಿ ಹರಾಜಿಗೂ ಮುನ್ನ ಯಾವ್ಯಾವ ಆಟಗಾರನನ್ನು ಉಳಿಸಿಕೊಳ್ಳಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

2 / 6

ವಿರಾಟ್ ಕೊಹ್ಲಿ ಐಪಿಎಲ್ ಮೊದಲ ಸೀಸನ್‌ನಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ. ಲೀಗ್ ಇತಿಹಾಸದಲ್ಲಿ ಎಲ್ಲಾ ಸೀಸನ್​ನಲ್ಲೂ ಒಂದೇ ತಂಡದ ಪರ ಕಣಕ್ಕಿಳಿದ ಏಕೈಕ ಆಟಗಾರ ಕೊಹ್ಲಿ. ಹೀಗಾಗಿ ವಿರಾಟ್ ಮತ್ತೊಮ್ಮೆ ಆರ್ಸಿಬಿಯ ಭಾಗವಾಗುವುದು ಬಹುತೇಕ ಖಚಿತವಾಗಿದೆ.

3 / 6

ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಬಹುತೇಕ ಖಚಿತ. ಸಿರಾಜ್ ಎಲ್ಲಾ ಮೂರು ಮಾದರಿಗಳಲ್ಲಿ ಭಾರತ ತಂಡದ ಭಾಗವಾಗಿದ್ದಾರೆ. ಹೊಸ ಚೆಂಡು ಹಾಗೂ ಡೆತ್ ಓವರ್‌ಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಬಲ್ಲರು. ಅಂತಹ ಪರಿಸ್ಥಿತಿಯಲ್ಲಿ, ಫ್ರ್ಯಾಂಚೈಸ್ ಅವರನ್ನು ತಂಡದಿಂದ ಕೈಬಿಡುವ ಯೋಚನೆ ಮಾಡುವುದಿಲ್ಲ.

4 / 6

ಇಂಗ್ಲೆಂಡ್​ನ ಸ್ಫೋಟಕ ಬ್ಯಾಟ್ಸ್‌ಮನ್ ವಿಲ್ ಜಾಕ್ಸ್ ಕಳೆದ ಐಪಿಎಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿದ್ದರು. ಇದಲ್ಲದೇ ಬೌಲಿಂಗ್​ನಲ್ಲೂ ಎರಡು ವಿಕೆಟ್ ಪಡೆದಿದ್ದರು. ಜಾಕ್ಸ್ ತನ್ನ ಸ್ಫೋಟಕ ಬ್ಯಾಟಿಂಗ್​ನಿಂದ ಪಂದ್ಯದ ದಿಕ್ಕು ಬದಲಿಸುವ ಸಾಮಥ್ಯ್ರ ಹೊಂದಿದ್ದಾರೆ. ಇದೇ ಕಾರಣಕ್ಕೆ ಆರ್‌ಸಿಬಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

5 / 6

ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಉಳಿಯಬಹುದು. ಕಳೆದ ಐಪಿಎಲ್​ನಲ್ಲಿ ಟ್ರೇಡಿಂಗ್ ಮೂಲಕ ಮುಂಬೈ ಇಂಡಿಯನ್ಸ್​ ತಂಡದಿಂದ ಆರ್​ಸಿಬಿಗೆ ಸೇರಿಕೊಂಡಿದ್ದ ಗ್ರೀನ್, ಆಲ್​ರೌಂಡರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಅಲ್ಲದೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಬಿಡುಗಡೆ ಮಾಡುವ ಮೂಲಕ ಫ್ರಾಂಚೈಸ್ ಗ್ರೀನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

6 / 6

ರಜತ್ ಪಾಟಿದಾರ್ ಸ್ಪಿನ್ ಹಾಗೂ ಪೇಸ್ ಬೌಲಿಂಗ್ ವಿರುದ್ಧ ಉತ್ತಮವಾಗಿ ಬ್ಯಾಟ್ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಐಪಿಎಲ್‌ನ ಕಳೆದ 24 ಇನ್ನಿಂಗ್ಸ್‌ಗಳಲ್ಲಿ, ಅವರು 35 ರ ಸರಾಸರಿ ಮತ್ತು 159 ಸ್ಟ್ರೈಕ್ ರೇಟ್‌ನಲ್ಲಿ 799 ರನ್ ಗಳಿಸಿದ್ದಾರೆ. ಇದರಲ್ಲಿ 51 ಬೌಂಡರಿ ಹಾಗೂ 54 ಸಿಕ್ಸರ್‌ಗಳು ಸೇರಿವೆ. ಅಂತಹ ಪರಿಸ್ಥಿತಿಯಲ್ಲಿ, ಅವರು ತಂಡದಲ್ಲಿ ಉಳಿಯುವುದು ಬಹುತೇಕ ಖಚಿತವಾಗಿದೆ.

Loading...
Unable to load recommendations.
Follow Us