AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡವನ್ನು ಮುನ್ನಡೆಸಿ ವಿಶೇಷ ದಾಖಲೆ ಬರೆದ ಜಿತೇಶ್ ಶರ್ಮಾ

IPL 2025 RCB Captain: ಐಪಿಎಲ್ ಸೀಸನ್-17 ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಒಟ್ಟು 7 ನಾಯಕರುಗಳು ಮುನ್ನಡೆಸಿದ್ದಾರೆ. ಇವರಲ್ಲಿ ಕೊನೆಯವರು ಫಾಫ್ ಡುಪ್ಲೆಸಿಸ್. ಇದೀಗ ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡವನ್ನು ಇಬ್ಬರು ಮುನ್ನಡೆಸಿದ್ದಾರೆ. ಇದರೊಂದಿಗೆ ಆರ್​ಸಿಬಿ ತಂಡದ ನಾಯಕರುಗಳ ಸಂಖ್ಯೆ 9 ಕ್ಕೇರಿದೆ.

ಝಾಹಿರ್ ಯೂಸುಫ್
|

Updated on: May 24, 2025 | 12:32 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಈವರೆಗೆ 9 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುವ ಮೂಲಕ ಜಿತೇಶ್ ಆರ್​ಸಿಬಿ ತಂಡದ 9ನೇ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ವಿಶೇಷ ದಾಖಲೆಯನ್ನು ಸಹ ಬರೆದಿದ್ದಾರೆ.

1 / 11
ಅಂದರೆ ಆರ್​ಸಿಬಿ ತಂಡವನ್ನು ಈವರೆಗೆ ಯಾವುದೇ ವಿಕೆಟ್ ಕೀಪರ್ ಮುನ್ನಡೆಸಿಲ್ಲ. ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥಿಯಾಗಿ ವಿಕೆಟ್ ಕೀಪರ್ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವನ್ನು ಮುನ್ನಡೆಸಿದ ಮೊದಲ ವಿಕೆಟ್ ಕೀಪರ್  ನಾಯಕ ಎಂಬ ಹೆಗ್ಗಳಿಕೆಯನ್ನು ಜಿತೇಶ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಆರ್​ಸಿಬಿ ತಂಡವನ್ನು ಈವರೆಗೆ ಮುನ್ನಡೆಸಿದ ನಾಯಕರುಗಳು ಯಾರೆಲ್ಲಾ ಎಂದು ನೋಡುವುದಾದರೆ...

2 / 11
ರಾಹುಲ್ ದ್ರಾವಿಡ್: ಆರ್​ಸಿಬಿ ತಂಡದ ಮೊದಲ ನಾಯಕ ರಾಹುಲ್ ದ್ರಾವಿಡ್. 2008 ರ ಚೊಚ್ಚಲ ಐಪಿಎಲ್​ನಲ್ಲಿ ಆರ್​ಸಿಬಿ ತಂಡವನ್ನು 14 ಪಂದ್ಯಗಳಲ್ಲಿ ದ್ರಾವಿಡ್ ಮುನ್ನಡೆಸಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು.

3 / 11
ಕೆವಿನ್ ಪೀಟರ್ಸನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 2ನೇ ನಾಯಕ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್. 2009 ರಲ್ಲಿ ಪೀಟರ್ಸನ್ ಆರ್​ಸಿಬಿ ತಂಡವನ್ನು 6 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಈ ವೇಳೆ ಆರ್​ಸಿಬಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿತ್ತು.

4 / 11
ಅನಿಲ್ ಕುಂಬ್ಳೆ: 2009 ರಲ್ಲಿ ಕೆವಿನ್ ಪೀಟರ್ಸನ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಹೀಗಾಗಿ ಅನಿಲ್ ಕುಂಬ್ಳೆ ಉಳಿದ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಅಂತಿಮ ಮ್ಯಾಚ್​ನಲ್ಲಿ ಡೆಕ್ಕನ್ ಚಾರ್ಜರ್ಸ್​ ವಿರುದ್ದ ಸೋತು ಪ್ರಶಸ್ತಿಯನ್ನು ಕೈಚೆಲ್ಲಿಕೊಂಡಿತು. ಇನ್ನು 2010ರಲ್ಲೂ ನಾಯಕರಾಗಿ ಮುಂದುವರೆದ ಕುಂಬ್ಳೆ ಒಟ್ಟು 35 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. ಕುಂಬ್ಳೆ ನಾಯಕತ್ವದಲ್ಲಿ ಆರ್​ಸಿಬಿ 19 ಪಂದ್ಯಗಳಲ್ಲಿ ಜಯ ಸಾಧಿಸಿದೆ.

5 / 11
ಡೇನಿಯಲ್ ವೆಟ್ಟೋರಿ: ಆರ್​ಸಿಬಿ ತಂಡದ ನಾಲ್ಕನೇ ನಾಯಕ ಡೇನಿಯಲ್ ವೆಟ್ಟೋರಿ. 2011 ರಲ್ಲಿ ವೆಟ್ಟೋರಿ ನಾಯಕತ್ವದಲ್ಲಿ ಆರ್​ಸಿಬಿ 2ನೇ ಬಾರಿ ಫೈನಲ್ ಪ್ರವೇಶಿಸಿತ್ತು. ಆದರೆ ಸಿಎಸ್​ಕೆ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು 2012 ರ ಸೀಸನ್​ನಲ್ಲೂ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವೆಟ್ಟೋರಿ ಒಟ್ಟು 28 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಆರ್​ಸಿಬಿ 15 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

6 / 11
ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ 2013 ರಿಂದ 2021 ರವರೆಗೆ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. 2016 ರಲ್ಲಿ ಫೈನಲ್​ ಪ್ರವೇಶಿಸಿದ್ದ ಆರ್​ಸಿಬಿ ಎಸ್​ಆರ್​ಹೆಚ್ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ನಿರಾಸೆ ಅನುಭವಿಸಿತು. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ 143 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಈ ವೇಳೆ 66 ಪಂದ್ಯಗಳಲ್ಲಿ ಜಯ ಸಾಧಿಸಿದೆ.

7 / 11
ಶೇನ್ ವಾಟ್ಸನ್: 2017 ರ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಅಲಭ್ಯತೆಯ ನಡುವೆ ಶೇನ್ ವಾಟ್ಸನ್ ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ.

8 / 11
ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡವನ್ನು ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದಾರೆ. ಐಪಿಎಲ್ 2022 ರಲ್ಲಿ ಆರ್​ಸಿಬಿಗೆ ಎಂಟ್ರಿ ಕೊಟ್ಟಿದ್ದ ಫಾಫ್ 42 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

9 / 11
ರಜತ್ ಪಾಟಿದಾರ್: ಈ ಬಾರಿಯ ಐಪಿಎಲ್​ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅದರಂತೆ ಈವರೆಗೆ 11 ಪಂದ್ಯಗಳಲ್ಲಿ ಮುನ್ನಡೆಸಿರುವ ರಜತ್ 8 ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

10 / 11
ಜಿತೇಶ್ ಶರ್ಮಾ: ರಜತ್ ಪಾಟಿದಾರ್ ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದ ಕಾರಣ, ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್​ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ಹೀಗಾಗಿ ಆರ್​ಸಿಬಿ ತಂಡವನ್ನು ಜಿತೇಶ್ ಶರ್ಮಾ ಮುನ್ನಡೆಸಿದ್ದಾರೆ. ಇದಾಗ್ಯೂ ಚೊಚ್ಚಲ ಪಂದ್ಯದಲ್ಲೇ ಜಿತೇಶ್ ಸೋಲಿನ ರುಚಿ ನೋಡುವಂತಾಯಿತು.

11 / 11