Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಇತಿಹಾಸ ನಿರ್ಮಿಸಿದ RCB

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಯಾವುದೇ ತಂಡ 200 ರನ್​ಗಳನ್ನು ಚೇಸ್ ಮಾಡಿ ಗೆದ್ದಿರಲಿಲ್ಲ. ಆದರೆ ಈ ಬಾರಿಯ WPLನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇತಿಹಾಸ ನಿರ್ಮಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ಪಡೆ ಶುಭಾರಂಭ ಮಾಡಿದೆ.

ಝಾಹಿರ್ ಯೂಸುಫ್
|

Updated on: Feb 15, 2025 | 7:11 AM

ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-3ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಬರೋಬ್ಬರಿ 202 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತುವ ಮೂಲಕ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸ್ಮತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

1 / 8
ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ಪರ ಬೆತ್ ಮೂನಿ ಹಾಗೂ ಆಶ್ಲೀ ಗಾರ್ಡ್ನರ್ ಭರ್ಜರಿ ಪ್ರದರ್ಶನ ನೀಡಿದರು. ಬೆತ್ ಮೂನಿ 56 ರನ್ ಬಾರಿಸಿದರೆ, ಆಶ್ಲೀ ಗಾರ್ಡ್ನರ್ 37 ಎಸೆತಗಳಲ್ಲಿ 8 ಸಿಕ್ಸ್​ಗಳೊಂದಿಗೆ ಅಜೇಯ 79 ರನ್ ಸಿಡಿಸಿದರು. ಈ ಮೂಲಕ ಗುಜರಾತ್ ಜೈಂಟ್ಸ್ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.

2 / 8
202 ರನ್​ಗಳ ಕಠಿಣ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕಿ ಸ್ಮೃತಿ ಮಂಧಾನ (9) ರನ್ ಬಾರಿಸಿ ಔಟಾದರೆ, ಡೇನಿಯಲ್ ವ್ಯಾಟ್ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ರಾಘ್ವಿ ಬಿಸ್ತ್ 25 ರನ್​ಗಳಿಸಿ ಔಟಾದರು.

3 / 8
ಈ ಹಂತದಲ್ಲಿ ಕಣಕ್ಕಿಳಿದ ಎಲ್ಲಿಸ್ ಪೆರ್ರಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 34 ಎಸೆತಗಳನ್ನು ಎದುರಿಸಿದ ಪೆರ್ರಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 57 ರನ್ ಬಾರಿಸಿದರು. ಇದಾಗ್ಯೂ ಕೊನೆಯ 8 ಓವರ್​ಗಳಲ್ಲಿ ಆರ್​ಸಿಬಿ ತಂಡಕ್ಕೆ 93 ರನ್​ಗಳ ಅವಶ್ಯಕತೆಯಿತ್ತು.

4 / 8
ಈ ವೇಳೆ ಕ್ರೀಸ್​ಗೆ ಆಗಮಿಸಿದ ರಿಚಾ ಘೋಷ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ರಿಚಾ ಸಿಕ್ಸ್-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಆರ್​ಸಿಬಿ ಆಟಗಾರ್ತಿಯ ಬ್ಯಾಟ್​ನಿಂದ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

5 / 8
ರಿಚಾ ಘೋಷ್​ಗೆ ಉತ್ತಮ ಸಾಥ್ ನೀಡಿದ ಕನಿಕಾ ಅಹುಜಾ 13 ಎಸೆತಗಳಲ್ಲಿ 30 ರನ್ ಬಾರಿಸಿದರು. ಅತ್ತ ಕಡೆ ರಿಚಾ 27 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 64 ರನ್ ಚಚ್ಚಿದರು. ಈ ಮೂಲಕ ಆರ್​ಸಿಬಿ ತಂಡ 18.3 ಓವರ್​ಗಳಲ್ಲಿ 202 ರನ್ ಬಾರಿಸಿ 6 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

6 / 8
ಈ ಗೆಲುವಿನೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಗರಿಷ್ಠ ರನ್ ಚೇಸ್ ಮಾಡಿ ಗೆದ್ದ ದಾಖಲೆ ಆರ್​ಸಿಬಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಗುಜರಾತ್ ಜೈಂಟ್ಸ್ ನೀಡಿದ 191 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿ ಮುಂಬೈ ಇಂಡಿಯನ್ಸ್ ಈ ದಾಖಲೆ ನಿರ್ಮಿಸಿದ್ದರು.

7 / 8
ಇದೀಗ 202 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಈ ದಾಖಲೆಯೊಂದಿಗೆ ಆರ್​ಸಿಬಿ ಪಡೆ ಐಪಿಎಲ್ ಸೀಸನ್-3 ರಲ್ಲಿ ಶುಭಾರಂಭ ಮಾಡಿರುವುದು ವಿಶೇಷ.

8 / 8
Follow us