AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರ್​ಸಿಬಿಗೆ ತಲೆನೋವಾದ 7 ಕೋಟಿ ಮೊತ್ತದ ಸ್ಟಾರ್ ಆಲ್‌ರೌಂಡರ್ ಕಳಪೆ ಪ್ರದರ್ಶನ

Venkatesh Iyer's Poor Form: ವೆಂಕಟೇಶ್ ಅಯ್ಯರ್ ವಿಜಯ್ ಹಜಾರೆ ಟ್ರೋಫಿಯಲ್ಲಿ ನೀರಸ ಪ್ರದರ್ಶನ ನೀಡಿದ್ದು, ಮೂರು ಪಂದ್ಯಗಳಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದಾರೆ. ಆರ್‌ಸಿಬಿ 7 ಕೋಟಿಗೆ ಖರೀದಿಸಿದ ಅಯ್ಯರ್ ಕಳಪೆ ಫಾರ್ಮ್, ಮುಂಬರುವ ಐಪಿಎಲ್‌ಗೆ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅವರ ಬದಲಿಗೆ ತಂಡದಲ್ಲಿ ಬೇರೆ ಆಯ್ಕೆಗಳೂ ಇವೆ ಎಂಬುದು ಗಮನಾರ್ಹ.

ಪೃಥ್ವಿಶಂಕರ
|

Updated on: Dec 29, 2025 | 10:34 PM

Share
ವಿಜಯ್ ಹಜಾರೆ ಟ್ರೋಫಿಯ ಮೂರನೇ ಸುತ್ತಿನಲ್ಲಿ ಮಧ್ಯಪ್ರದೇಶ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮಧ್ಯಪ್ರದೇಶ ಪರ ಕಣಕ್ಕಿಳಿದಿದ್ದ ಸ್ಟಾರ್ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ನೀರಸ ಪ್ರದರ್ಶನ ನೀಡಿದರು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್  ಕೇವಲ 8 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.

1 / 6
ವಿಜಯ್ ಹಜಾರೆ ಟ್ರೋಫಿಯಲ್ಲಿ ಇದುವರೆಗೆ 3 ಪಂದ್ಯಗಳು ನಡೆದಿವೆ. ಈ ಮೂರು ಪಂದ್ಯಗಳಲ್ಲೂ ವೆಂಕಟೇಶ್ ಪ್ರದರ್ಶನ ಹೇಳಿಕೊಳ್ಳುವಂತಿಲ್ಲ. ಈ ಪಂದ್ಯಕ್ಕೂ ಮುನ್ನ ನಡೆದ ಮೊದಲೆರಡು ಪಂದ್ಯಗಳಲ್ಲಿ ವೆಂಕಟೇಶ್ ಉತ್ತಮ ಆರಂಭ ಪಡೆದರಾದರೂ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಬದಲಿಸುವಲ್ಲಿ ವಿಫಲರಾಗಿದ್ದಾರೆ.

2 / 6
ರಾಜಸ್ಥಾನ್ ವಿರುದ್ಧದ ಮೊದಲ ಪಂದ್ಯದಲ್ಲಿ 34 ರನ್​ಗಳ ಇನ್ನಿಂಗ್ಸ್ ಆಡಿದ್ದ ವೆಂಕಟೇಶ್ ಉತ್ತಮ ಆರಂಭ ಪಡೆದುಕೊಂಡಿದ್ದರು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲಿಲ್ಲ. ಇದೇ ರೀತಿ ತಮಿಳುನಾಡು ವಿರುದ್ಧದ ಪಂದ್ಯದಲ್ಲೂ ವೆಂಕಟೇಶ್ 32 ರನ್ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು.

3 / 6
ವಾಸ್ತವವಾಗಿ ಮುಂಬರುವ ಐಪಿಎಲ್​​ನಲ್ಲಿ ವೆಂಕಟೇಶ್ ಅಯ್ಯರ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ ಆಡಲಿದ್ದಾರೆ.  ಐಪಿಎಲ್ 2026 ರ ಮಿನಿ-ಹರಾಜಿನಲ್ಲಿ ಆರ್‌ಸಿಬಿ, ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿಗೆ ಖರೀದಿಸಿತು.

4 / 6
ಈ ಹಿಂದಿನ ಮೆಗಾ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಕೆಕೆಆರ್ ಬರೋಬ್ಬರಿ 23.75 ಕೋಟಿ ನೀಡಿ ಖರೀದಿಸಿತ್ತು. ಆದರೆ ವೆಂಕಟೇಶ್ ಅವರ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ಹೀಗಾಗಿ ಅವರನ್ನು ಕೆಕೆಆರ್ ಕೈಬಿಟ್ಟಿತ್ತು. ಇದೀಗ ಆರ್​ಸಿಬಿ ಅವರನ್ನು 7 ಕೋಟಿ ರೂ. ನೀಡಿ ಖರೀದಿಸಿದೆ. ಅಲ್ಲದೆ ವೆಂಕಟೇಶ್​ಗೆ ಮಧ್ಯಮ ಕ್ರಮಾಂಕದಲ್ಲಿ ಆಡುವ ಅವಕಾಶವೂ ಸಿಗಲಿದೆ.

5 / 6
ಆದರೆ ಪ್ರಸ್ತುತ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ವೆಂಕಟೇಶ್ ಆರ್​ಸಿಬಿಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಾರಾ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಆದಾಗ್ಯೂ ವೆಂಕಟೇಶ್ ಬದಲಿಯಾಗಿ ತಂಡದಲ್ಲಿ ಬೇರೆ ಆಯ್ಕೆಗಳಿದ್ದು ಒಂದು ವೇಳೆ ವೆಂಕಟೇಶ್ ಉತ್ತಮ ಪ್ರದರ್ಶನ ನೀಡದಿದ್ದರೆ ಅವರ ಬದಲಿಯಾಗಿ ಬೇರೆಯವರಿಗೆ ಅವಕಾಶ ಸಿಗಲಿದೆ.

6 / 6
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ

ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ

ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್

ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು