WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ನ 12ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 178 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಜೈಂಟ್ಸ್ ತಂಡ 20 ಓವರ್‌ಗಳಲ್ಲಿ ಗಳಿಸಿದ್ದು ಕೇವಲ 117 ರನ್ ಮಾತ್ರ. ಈ ಮೂಲಕ RCB ತಂಡ 61 ರನ್ ಗಳ ಅಮೋಘ ಗೆಲುವು ದಾಖಲಿಸಿದೆ.
Updated on: Jan 20, 2026 | 7:24 AM

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸತತ 6 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ. ಅಂದರೆ WPL ನಲ್ಲಿ ಇದೇ ಮೊದಲ ಬಾರಿಗೆ ತಂಡವೊಂದು ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿದೆ.

ವಡೋದರದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್‌ನ 12ನೇ ಪಂದ್ಯದಲ್ಲಿ RCB ತಂಡವು ಗುಜರಾತ್ ಜೈಂಟ್ಸ್ ತಂಡವನ್ನು 61 ರನ್ ಗಳಿಂದ ಮಣಿಸಿತ್ತು. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025 ರಲ್ಲಿ ಆಡಿದ ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ದಾಖಲೆಯನ್ನು ಮುರಿದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025 ರಲ್ಲಿ ಆಡಿದ ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ದಾಖಲೆಯನ್ನು ಮುರಿದಿದೆ.

2025 ರಿಂದ ಶುರುವಾದ ರಾಯಲ್ ಪಡೆಯ ಗೆಲುವಿನ ನಾಗಾಲೋಟ 2026 ರಲ್ಲೂ ಮುಂದುವರೆದಿದೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಸತತವಾಗಿ 6 ಪಂದ್ಯಗಳನ್ನು ಗೆದ್ದ ತಂಡವೆಂಬ ಆಲ್ ಟೈಮ್ ರೆಕಾರ್ಡ್ ನಿರ್ಮಿಸಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




