WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸತತ 6 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ. ಅಂದರೆ WPL ನಲ್ಲಿ ಇದೇ ಮೊದಲ ಬಾರಿಗೆ ತಂಡವೊಂದು ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿದೆ.

ವಡೋದರದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್‌ನ 12ನೇ ಪಂದ್ಯದಲ್ಲಿ RCB ತಂಡವು ಗುಜರಾತ್ ಜೈಂಟ್ಸ್ ತಂಡವನ್ನು 61 ರನ್ ಗಳಿಂದ ಮಣಿಸಿತ್ತು. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025 ರಲ್ಲಿ ಆಡಿದ ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ದಾಖಲೆಯನ್ನು ಮುರಿದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025 ರಲ್ಲಿ ಆಡಿದ ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ದಾಖಲೆಯನ್ನು ಮುರಿದಿದೆ.

2025 ರಿಂದ ಶುರುವಾದ ರಾಯಲ್ ಪಡೆಯ ಗೆಲುವಿನ ನಾಗಾಲೋಟ 2026 ರಲ್ಲೂ ಮುಂದುವರೆದಿದೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಸತತವಾಗಿ 6 ಪಂದ್ಯಗಳನ್ನು ಗೆದ್ದ ತಂಡವೆಂಬ ಆಲ್ ಟೈಮ್ ರೆಕಾರ್ಡ್ ನಿರ್ಮಿಸಿದೆ.