AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್ ಚರಿತ್ರೆಯನ್ನೇ ಬದಲಿಸಿದ RCB

IPL 2026 RCB vs GT: ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 27, 2026 | 9:04 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 19 ಬಾರಿ ಪ್ಲೇಆಫ್ ಪಂದ್ಯಗಳು ನಡೆದಿವೆ. ಈ ವೇಳೆ ಯಾವುದೇ ತಂಡಕ್ಕೂ ಸಾಧ್ಯವಾಗದಿರುವುದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ..! (PC: IPL)

1 / 5
ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಆರ್​ಸಿಬಿ ಪಡೆ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 254 ರನ್​ಗಳು. (PC: IPL)

2 / 5
ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ರನ್​ ಕಲೆಹಾಕಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯನ್ನು ಆರ್​ಸಿಬಿ ತಂಡ ತನ್ನದಾಗಿಸಿಕೊಂಡಿತು. ಅಂದರೆ ಐಪಿಎಲ್​ ಪ್ಲೇಆಫ್ ಚರಿತ್ರೆಯಲ್ಲಿ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ರನ್​ ಗಳಿಸಲು ಸಾಧ್ಯವಾಗಿರಲಿಲ್ಲ. (PC: IPL)

3 / 5
ಈ ಹಿಂದೆ, ಅಂದರೆ 2023ರ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 233 ರನ್​ ಬಾರಿಸಿದ್ದು ಈವರೆಗಿನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ ಅದೇ ಗುಜರಾತ್ ಟೈಟಾನ್ಸ್ ವಿರುದ್ಧ ಅಬ್ಬರಿಸಿ ಆರ್​ಸಿಬಿ ಹೊಸ ಇತಿಹಾಸ ನಿರ್ಮಿಸಿದೆ. (PC: IPL)

4 / 5
ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ಸ್ಕೋರ್​ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಹಾಗೆಯೇ ಈ ಪಂದ್ಯದಲ್ಲಿ 92 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್​ನಲ್ಲಿ (ನಾಕೌಟ್ ಅಲ್ಲದೇ) ಅತೀ ಹೆಚ್ಚು ರನ್​ಗಳ ಅಂತರದಿಂದ ಗೆದ್ದ ಟೀಮ್ ಎಂಬ ಅಮೋಘ ದಾಖಲೆಯನ್ನು ಕೂಡ ಆರ್​ಸಿಬಿ ನಿರ್ಮಿಸಿದೆ. ಈ ಮೂಲಕ ಗರಿಷ್ಠ ಸ್ಕೋರ್ ಹಾಗೂ ಗರಿಷ್ಠ ರನ್​ಗಳ ವಿಜಯದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ. (PC: IPL)

5 / 5
Follow Us
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ

ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 

ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ

'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'

ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!

SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು

ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ

ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು

ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು

ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್