IPL 2026: ಪ್ಲೇಆಫ್ ಚರಿತ್ರೆಯನ್ನೇ ಬದಲಿಸಿದ RCB
IPL 2026 RCB vs GT: ಐಪಿಎಲ್ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್ಗಳಲ್ಲಿ 162 ರನ್ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್ಸಿಬಿ ತಂಡ 92 ರನ್ಗಳ ಭರ್ಜರಿ ಜಯ ಸಾಧಿಸಿದೆ.
Updated on: May 27, 2026 | 9:04 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 19 ಬಾರಿ ಪ್ಲೇಆಫ್ ಪಂದ್ಯಗಳು ನಡೆದಿವೆ. ಈ ವೇಳೆ ಯಾವುದೇ ತಂಡಕ್ಕೂ ಸಾಧ್ಯವಾಗದಿರುವುದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ..! (PC: IPL)

ಧರ್ಮಶಾಲಾದ ಹೆಚ್ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಆರ್ಸಿಬಿ ಪಡೆ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 254 ರನ್ಗಳು. (PC: IPL)

ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ರನ್ ಕಲೆಹಾಕಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯನ್ನು ಆರ್ಸಿಬಿ ತಂಡ ತನ್ನದಾಗಿಸಿಕೊಂಡಿತು. ಅಂದರೆ ಐಪಿಎಲ್ ಪ್ಲೇಆಫ್ ಚರಿತ್ರೆಯಲ್ಲಿ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಿರಲಿಲ್ಲ. (PC: IPL)

ಈ ಹಿಂದೆ, ಅಂದರೆ 2023ರ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 233 ರನ್ ಬಾರಿಸಿದ್ದು ಈವರೆಗಿನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ ಅದೇ ಗುಜರಾತ್ ಟೈಟಾನ್ಸ್ ವಿರುದ್ಧ ಅಬ್ಬರಿಸಿ ಆರ್ಸಿಬಿ ಹೊಸ ಇತಿಹಾಸ ನಿರ್ಮಿಸಿದೆ. (PC: IPL)

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಪ್ಲೇಆಫ್ ಸುತ್ತಿನಲ್ಲಿ 250+ ಸ್ಕೋರ್ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಹಾಗೆಯೇ ಈ ಪಂದ್ಯದಲ್ಲಿ 92 ರನ್ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್ನಲ್ಲಿ (ನಾಕೌಟ್ ಅಲ್ಲದೇ) ಅತೀ ಹೆಚ್ಚು ರನ್ಗಳ ಅಂತರದಿಂದ ಗೆದ್ದ ಟೀಮ್ ಎಂಬ ಅಮೋಘ ದಾಖಲೆಯನ್ನು ಕೂಡ ಆರ್ಸಿಬಿ ನಿರ್ಮಿಸಿದೆ. ಈ ಮೂಲಕ ಗರಿಷ್ಠ ಸ್ಕೋರ್ ಹಾಗೂ ಗರಿಷ್ಠ ರನ್ಗಳ ವಿಜಯದೊಂದಿಗೆ ಆರ್ಸಿಬಿ ಪ್ಲೇಆಫ್ನಲ್ಲಿ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ. (PC: IPL)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




