
IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ದಾಂಡಿಗರು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಇತಿಹಾಸ ಬರೆದಿದೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ವಿರುದ್ಧ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಈ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಆರ್ಸಿಬಿ ದಾಂಡಿಗರು 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್ಗಳು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 250 ರನ್ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆ ಆರ್ಸಿಬಿ ಪಾಲಾಯಿತು.

ಕಳೆದ 18 ವರ್ಷಗಳಲ್ಲಿ ಸಿಎಸ್ಕೆ ವಿರುದ್ಧ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ಸ್ಕೋರ್ಗಳಿಸಲು ಸಾಧ್ಯವಾಗಿರಲಿಲ್ಲ. 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ 2024 ರಲ್ಲಿ ಗುಜರಾತ್ ಟೈಟಾನ್ಸ್ ತಂಡವು 231 ರನ್ಗಳಿಸಿದ್ದು ಈವರೆಗಿನ ಶ್ರೇಷ್ಠ ಸಾಧನೆಯಾಗಿತ್ತು.

ಆದರೆ ಈ ಬಾರಿ ಆರ್ಸಿಬಿ ದಾಂಡಿಗರು ಸಿಎಸ್ಕೆ ತಂಡದ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಿದ್ದಾರೆ. 20 ಓವರ್ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್ಗಳನ್ನು ಚೆಂಡಾಡುವ ಮೂಲಕ ಬರೋಬ್ಬರಿ 250 ರನ್ ಚಚ್ಚಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 5 ಬಾರಿಯ ಚಾಂಪಿಯನ್ ಸಿಎಸ್ಕೆ ವಿರುದ್ಧ 250 ರನ್ ಕಲೆಹಾಕಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಆರ್ಸಿಬಿ ತಂಡ ತನ್ನದಾಗಿಸಿಕೊಂಡಿದೆ.