AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ್ದು ಅಂತಿಂಥ ಗೆಲುವಲ್ಲ, ಐಪಿಎಲ್ ಇತಿಹಾಸದಲ್ಲೇ ಮೊದಲು..!

IPL 2025 RCB vs PBSK: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ಕೇವಲ 101 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: May 30, 2025 | 7:09 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಬಾರಿಸಿದೆ. ಅದು ಕೂಡ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮಾರಕ ದಾಳಿ ಸಂಘಟಿಸಿದ ಆರ್​ಸಿಬಿ ಬೌಲರ್​ಗಳು ಪವರ್​ಪ್ಲೇನಲ್ಲೇ ಪವರ್​ ತೋರಿಸಿದ್ದರು. ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಪಂಜಾಬ್ ಪಡೆಯು 5 ವಿಕೆಟ್ ಕಳೆದುಕೊಂಡಿತು. ಇನ್ನು 14.1 ಓವರ್​ಗಳಲ್ಲಿ 101 ರನ್​ಗಳಿಸುವಲಷ್ಟರಲ್ಲಿ ಆಲೌಟ್ ಆಯಿತು.

2 / 6
ಅದರಂತೆ 102 ರನ್​ಗಳ ಸುಲಭ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಸ್ಫೋಟಕ ಆರಂಭ ಒದಗಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಸಾಲ್ಟ್ ಆ ಬಳಿಕ ಅಬ್ಬರಿಸಿದರು. ಪರಿಣಾಮ  10 ಓವರ್​ಗಳಲ್ಲಿ ಆರ್​ಸಿಬಿ ತಂಡವು 2 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು.

3 / 6
ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ ಆರ್​ಸಿಬಿ ತಂಡವು 9 ವರ್ಷಗಳ ಬಳಿಕ ಫೈನಲ್​ಗೆ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಐಪಿಎಲ್​ನಲ್ಲಿ ವಿಶೇಷ ದಾಖಲೆಯನ್ನು ಸಹ ಬರೆದಿದೆ. ಅದು ಕೂಡ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ದಾಖಲೆಯನ್ನು ಮುರಿಯುವ ಮೂಲಕ.

4 / 6
ಅಂದರೆ ಐಪಿಎಲ್​ ಇತಿಹಾಸದಲ್ಲೇ ಯಾವುದೇ ತಂಡ 60 ಎಸೆತಗಳನ್ನು ಬಾಕಿಯಿರಿಸಿ ಪ್ಲೇಆಫ್​ಗೆ ಪ್ರವೇಶಿಸಿರಲಿಲ್ಲ. ಇದೇ ಮೊದಲ ಬಾರಿಗೆ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ರಾಯಲ್ ಪಡೆ ಫೈನಲ್​ಗೇರಿದೆ. ಇದಕ್ಕೂ ಮುನ್ನ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 57 ಬಾಲ್​ಗಳನ್ನು ಬಾಕಿಯಿರಿಸಿ ಪ್ಲೇಆಫ್ ಪಂದ್ಯ ಗೆದ್ದಿದ್ದು ದಾಖಲೆಯಾಗಿತ್ತು.

5 / 6
ಆದರೆ ಈ ಬಾರಿ ಹೊಸ ಇತಿಹಾಸ ಸೃಷ್ಟಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಐಪಿಎಲ್ ಇತಿಹಾಸದಲ್ಲೇ ಫೈನಲ್​ಗೇರಿದ ಮೊದಲ ತಂಡ ಎನಿಸಿಕೊಂಡಿದೆ. ಇದೀಗ ಫೈನಲ್​ನಲ್ಲಿರುವ ಆರ್​ಸಿಬಿ ಇನ್ನೊಂದು ಪಂದ್ಯ ಗೆದ್ದರೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

6 / 6
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?

ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ

ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ

ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ

ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ

‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್

ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!