AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ದಾಂಡಿಗರ ಆರ್ಭಟಕ್ಕೆ ಟಿ20 ಲೀಗ್​ನ ವಿಶ್ವ ದಾಖಲೆಯೇ ಉಡೀಸ್

IPL 2026 RCB vs SRH: ಐಪಿಎಲ್​ನ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ಆರ್​ಸಿಬಿ ತಂಡ ಕೇವಲ 15.4 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Mar 29, 2026 | 7:09 AM

Share
IPL 2026: ಟಿ20 ಲೀಗ್​ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಮತ್ಯಾರೂ ಅಲ್ಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB). ಅದು ಕೂಡ ವಿಸ್ಫೋಟಕ ಬ್ಯಾಟಿಂಗ್​ನೊಂದಿಗೆ 200+ ರನ್​ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ.

1 / 6
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2026ರ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್​ ಕಲೆಹಾಕಿತ್ತು.

2 / 6
202 ರನ್​ಗಳ ಕಠಿಣ ಗುರಿ ಪಡೆದ ಆರ್​ಸಿಬಿ ಪರ ವಿರಾಟ್ ಕೊಹ್ಲಿ (69), ದೇವದತ್ ಪಡಿಕ್ಕಲ್ (61), ರಜತ್ ಪಾಟಿದಾರ್ (31) ಅಬ್ಬರಿಸಿದರು. ಈ ಅಬ್ಬರದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 15.4 ಓವರ್​ಗಳಲ್ಲಿ 203 ರನ್​ಗಳಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

3 / 6
ಈ ಭರ್ಜರಿ ಜಯದೊಂದಿಗೆ ಟಿ20 ಲೀಗ್ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 200+ ರನ್​ಗಳ ಗುರಿ ಬೆನ್ನತ್ತಿ ಗೆದ್ದ ತಂಡವೆಂಬ ವಿಶ್ವ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಸರಿನಲ್ಲಿತ್ತು.

4 / 6
2025ರ ಐಪಿಎಲ್​ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 15.5 ಓವರ್​ಗಳಲ್ಲಿ 210 ರನ್​ಗಳನ್ನು ಚೇಸ್ ಮಾಡಿದ್ದರು. ಈ ಮೂಲಕ ಟಿ20 ಲೀಗ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 200+ ರನ್​ ಚೇಸ್ ಮಾಡಿದ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಈ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಂಡಿಗರು ಅಳಿಸಿ ಹಾಕಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 15.4 ಓವರ್​ಗಳಲ್ಲಿ 203 ರನ್​ ಬಾರಿಸುವ ಮೂಲಕ ಆರ್​ಸಿಬಿ, ಟಿ20 ಲೀಗ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 200+ ರನ್​ ಚೇಸ್ ಮಾಡಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
Follow Us