AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹೀಗೊಂದು ‘ಅವಮಾನಕರ’ ದಾಖಲೆ ಬರೆದ RCB

IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 175 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.5 ಓವರ್​ಗಳಲ್ಲಿ 179 ರನ್​ಗಳಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಅವಮಾನಕರ ದಾಖಲೆಯೊಂದನ್ನು ತನ್ನದಾಗಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Apr 19, 2026 | 7:34 AM

Share
ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಆರು ತಂಡಗಳು ಒಂದೇ ಮೈದಾನದಲ್ಲಿ 100 ಪಂದ್ಯಗಳನ್ನಾಡಿದೆ. ಈ ನೂರು ಪಂದ್ಯಗಳ ಸಾಧನೆ ಮಾಡಿದ ಮೊದಲ ತಂಡ ಎಂದರೆ ಇಂಗ್ಲೆಂಡ್​ನ ಸರ್ರೆ ಟೀಮ್. ಇದಾದ ಬಳಿಕ ಹ್ಯಾಂಪ್​ಶೇರ್ ಸೇರಿದಂತೆ ಹಲವು ತಂಡಗಳು ಕೌಂಟಿ ಕ್ರಿಕೆಟ್​ನಲ್ಲಿ ಒಂದೇ ಮೈದಾನದಲ್ಲಿ 100 ಕ್ಕಿಂತ ಹೆಚ್ಚು ಪಂದ್ಯಗಳನ್ನಾಡಿದೆ. ಈ ಪಟ್ಟಿಗೆ ಹೊಸ ಸೇರ್ಪಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB).

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 100 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದಿದೆ. ಆದರೆ ಈ ವಿಶೇಷ ಪಂದ್ಯದಲ್ಲಿ ಆರ್​ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್​ಗಳ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಹೆಸರಿಗೆ ಹೀನಾಯ ದಾಖಲೆಯೊಂದು ಸೇರ್ಪಡೆಯಾಗಿದೆ. 

2 / 5
ಅಂದರೆ ಒಂದೇ ಮೈದಾನದಲ್ಲಿ 100 ಪಂದ್ಯಗಳನ್ನಾಡಿದ ತಂಡಗಳ ಪೈಕಿ ಮೂರು ಸ್ಮರಣೀಯ ಮ್ಯಾಚ್​ಗಳಲ್ಲಿ ಸೋಲನುಭವಿಸಿದ ಅಪಕೀರ್ತಿ ಆರ್​ಸಿಬಿ ಪಾಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಮತ್ತು 50ನೇ ಹಾಗೂ 100ನೇ ಪಂದ್ಯದಲ್ಲಿ ಸೋಲುವ ಮೂಲಕ ಈ ಹೀನಾಯ ದಾಖಲೆ ಬರೆದಿದೆ.

3 / 5
2008 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಚೊಚ್ಚಲ ಪಂದ್ಯದಲ್ಲಿ ಆರ್​ಸಿಬಿ ತಂಡವು ಕೆಕೆಆರ್​ ವಿರುದ್ಧ 140 ರನ್​​ಗಳ ಹೀನಾಯ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ 2015 ರಲ್ಲಿಇದೇ ಮೈದಾನದಲ್ಲಿ ತನ್ನ 50ನೇ ಪಂದ್ಯವಾಡಿತ್ತು. ಆದರೆ ಈ ಸ್ಮರಣೀಯ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್​​ಗಳಿಂದ ಪರಾಜಯಗೊಂಡಿತು.

4 / 5
ಇದೀಗ ಮತ್ತೊಂದು ಮೈಲುಗಲ್ಲಿನ ಪಂದ್ಯದಲ್ಲೂ ಸೋಲನುಭವಿಸಿದೆ. ಬೆಂಗಳೂರಿನಲ್ಲಿ ಕಣಕ್ಕಿಳಿದ 100ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಮೊದಲ ಮತ್ತು 50ನೇ ಹಾಗೂ 100ನೇ ಪಂದ್ಯಗಳನ್ನು ಸೋತ ವಿಶ್ವದ ಮೊದಲ ತಂಡವೆಂಬ ಅಪಕೀರ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ