- Kannada News Photo gallery Cricket photos RCB IPL 2023 full schedule Royal Challengers Bangalore to kick off IPL 2023 against Mumbai Indians Kannada News
RCB 2023 Schedule: ಆರ್ಸಿಬಿ ಮೊದಲ ಪಂದ್ಯ ಯಾವಾಗ?, ಯಾರ ವಿರುದ್ಧ?: ಡುಪ್ಲೆಸಿಸ್ ಪಡೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
IPL 2023 Schedule: 16ನೇ ಆವೃತ್ತಿಯ ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ.
Updated on:Feb 18, 2023 | 8:02 AM

2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಮಾರ್ಚ್ 31 ರಂದು ಈ ಮಿಲಿಯನ್ ಡಾಲರ್ ಟೂರ್ನಿಗೆ ಚಾಲನೆ ಸಿಗಲಿದೆ. ಈ ಬಾರಿ ವಿಶೇಷವಾಗಿ ಉದ್ಘಾಟನಾ ಸಮಾರಂಭ ಕೂಡ ಆಯೋಜಿಸಲಾಗಿದೆ.

ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ. ವಿಶೇಷ ಎಂದರೆ ಆರ್ಸಿಬಿ ತನ್ನ ಮೊದಲ ಪಂದ್ಯವನ್ನು ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಬೆಂಗಳೂರು ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಎರಡನೇ ಪಂದ್ಯ ಏಪ್ರಿಲ್ 6 ರಂದು ಆಯೋಜಿಸಲಾಗಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೋಲ್ಕತ್ತಾದಲ್ಲಿ ಆಡಲಿದೆ (ಸಂಜೆ 7:30 IST), ಮೂರನೇ ಪಂದ್ಯ ಏಪ್ರಿಲ್ 10, 2023 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಬೆಂಗಳೂರು (3:30PM IST).

ನಾಲ್ಕನೇ ಪಂದ್ಯ ಏಪ್ರಿಲ್ 15, 2023 - ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು (3:30PM IST), ಐದನೇ ಪಂದ್ಯ ಏಪ್ರಿಲ್ 17, 2023 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ಬೆಂಗಳೂರು (ಸಂಜೆ 7:30 IST).

ಆರನೇ ಪಂದ್ಯ ಏಪ್ರಿಲ್ 20, 2023 - ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೊಹಾಲಿ (ಮಧ್ಯಾಹ್ನ 3:30 IST), ಏಳನೇ ಪಂದ್ಯ ಏಪ್ರಿಲ್ 23, 2023 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್, ಬೆಂಗಳೂರು (3:30PM IST).

ಎಂಟನೇ ಪಂದ್ಯ ಏಪ್ರಿಲ್ 26, 2023 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಬೆಂಗಳೂರು (7:30 PM IST), ಒಂಬತ್ತನೇ ಮೇ 1, 2023 - ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಕ್ನೋ (7:30PM IST).

ಹತ್ತನೇ ಪಂದ್ಯ ಮೇ 6, 2023 - ದೆಹಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ (7:30PM IST), ಹನ್ನೊಂದನೇ ಪಂದ್ಯ ಮೇ 9, 2023 - ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ (7:30PM IST).

ಹನ್ನೆರಡನೇ ಪಂದ್ಯ ಮೇ 14, 2023 - ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಜೈಪುರ (ಮಧ್ಯಾಹ್ನ 3:30 IST), ಹದಿಮೂರನೇ ಪಂದ್ಯ ಮೇ 18, 2023 - ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಹೈದರಾಬಾದ್ (ಸಂಜೆ 7:30 IST) ಹಾಗೂ ಕೊನೆಯ ಪಂದ್ಯವನ್ನು ಮೇ 21, 2023 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಬೆಂಗಳೂರಿನಲ್ಲಿ ಆಡಲಿದೆ.

ಆರ್ಸಿಬಿ ತಂಡ 2023: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಮೈಕೆಲ್ ಬ್ರೇಸ್ವೆಲ್, ಮನೋಜ್ ಭಾಂಡಗೆ, ಸೋನು ಯಾದವ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ.
Published On - 8:02 am, Sat, 18 February 23
























