AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 6 ಉದ್ಘಾಟನಾ ಪಂದ್ಯಗಳನ್ನಾಡಿರುವ ಆರ್​ಸಿಬಿ ಗೆದ್ದಿದ್ದೆಷ್ಟು? ಸೋತಿದ್ದೆಷ್ಟು?

RCB IPL Opening Match History: 19ನೇ ಐಪಿಎಲ್ ಆವೃತ್ತಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ, ಆರ್​ಸಿಬಿ ತಂಡದ ಐಪಿಎಲ್ ಉದ್ಘಾಟನಾ ಪಂದ್ಯಗಳ ಇತಿಹಾಸವನ್ನು ಲೇಖನವು ವಿಶ್ಲೇಷಿಸುತ್ತದೆ. ಇದುವರೆಗೆ 6 ಉದ್ಘಾಟನಾ ಪಂದ್ಯಗಳನ್ನು ಆಡಿರುವ ಆರ್​ಸಿಬಿ, ಕೇವಲ 2ರಲ್ಲಿ ಗೆದ್ದು 4ರಲ್ಲಿ ಸೋಲನುಭವಿಸಿದೆ. ತಂಡದ ಹಿಂದಿನ ಪ್ರದರ್ಶನ ಮತ್ತು ಪ್ರಮುಖ ಅಂಕಿಅಂಶಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Mar 12, 2026 | 5:58 PM

Share
19ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಸಿಸಿಐ ನಿನ್ನೆಯಷ್ಟೆ ಈ ಮಿಲಿಯನ್ ಡಾಲರ್ ಟೂರ್ನಿಯ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 15 ದಿನಗಳ ಕಾಲ ನಡೆಯಲಿರುವ ಈ 20 ಪಂದ್ಯಗಳಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ 4 ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಉದ್ಘಾಟನಾ ಪಂದ್ಯವೂ ಸೇರಿದೆ. ಹಾಗಿದ್ದರೆ, ಆರ್​ಸಿಬಿ ಇದುವರೆಗೆ ಎಷ್ಟು ಉದ್ಘಾಟನಾ ಪಂದ್ಯಗಳನ್ನಾಡಿದೆ? ಅದರಲ್ಲಿ ತಂಡದ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

1 / 8
ಆರ್​ಸಿಬಿ ಹಾಲಿ ಚಾಂಪಿಯನ್ ಆಗಿರುವ ಕಾರಣ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಚಾಂಪಿಯನ್ ಆಗದ ಹೊರತಾಗಿಯೂ ಆರ್​ಸಿಬಿ ಈ ಹಿಂದೆ ಉದ್ಘಾಟನಾ ಪಂದ್ಯಗಳನ್ನು ಆಡಿದೆ. ಮುಗಿದಿರುವ 18 ಆವೃತ್ತಿಗಳಲ್ಲಿ ಆರ್​ಸಿಬಿ ಇದುವರೆಗೆ 6 ಬಾರಿ ಉದ್ಘಾಟನಾ ಪಂದ್ಯವನ್ನು ಆಡಿದೆ. ಆದರೆ ಈ ಉದ್ಘಾಟನಾ ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿದ್ದಕ್ಕಿಂತ ಸೋತಿದ್ದೆ ಹೆಚ್ಚು. ಕೇವಲ 2 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ, ಉಳಿದ 4 ಪಂದ್ಯಗಳಲ್ಲಿ ಸೋತಿದೆ.

2 / 8
ಆರ್​ಸಿಬಿ ಮೊಟ್ಟ ಮೊದಲ ಬಾರಿಗೆ ಮೊದಲ ಆವೃತ್ತಿಯ ಐಪಿಎಲ್​ನ ಮೊದಲ ಪಂದ್ಯದಲ್ಲೇ ಕಣಕ್ಕಿಳಿದಿತ್ತು. ಕೆಕೆಆರ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ 140 ರನ್​ಗಳಿಂದ ಸೋತಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಕೆಕೆಆರ್ 222 ರನ್ ಬಾರಿಸಿದರೆ, ಗುರಿ ಬೆನ್ನಟ್ಟಿದ ಆರ್​ಸಿಬಿ ಕೇವಲ 82 ರನ್​ಗಳಿಗೆ ಆಲೌಟ್ ಆಗಿತ್ತು.

3 / 8
ಆ ಬಳಿಕ 2017 ರ ಆವೃತ್ತಿಯಲ್ಲಿ ಆರ್​ಸಿಬಿ ಉದ್ಘಾಟನಾ ಪಂದ್ಯವನ್ನಾಡಿತ್ತು. ಆ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಎದುರಿಸಿದ್ದ ಆರ್​ಸಿಬಿ 35 ರನ್​ಗಳಿಂದ ಸೋತಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಸನ್​ರೈಸರ್ಸ್​ ಹೈದರಾಬಾದ್ 207 ರನ್ ಬಾರಿಸಿದರೆ, ಆರ್​​ಸಿಬಿ 172 ರನ್ ಕಲೆಹಾಕಲಷ್ಟೇ ಶಕ್ತವಾಗಿತ್ತು.

4 / 8
2019 ರಲ್ಲಿ ಮೂರನೇ ಬಾರಿಗೆ ಉದ್ಘಾಟನಾ ಪಂದ್ಯವನ್ನಾಡಿದ್ದ ಆರ್​ಸಿಬಿ, ಸಿಎಸ್​ಕೆ ವಿರುದ್ಧ 7 ವಿಕೆಟ್​ಗಳಿಂದ ಸೋತಿತ್ತು.  ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್​ಸಿಬಿ ಕೇವಲ 70 ರನ್​ಗಳಿಗೆ ಆಲೌಟ್ ಆದರೆ, ಈ ಗುರಿ ಬೆನ್ನಟ್ಟಿದ ಸಿಎಸ್​ಕೆ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತ್ತು.

5 / 8
2021 ರ ಆವೃತ್ತಿಯಲ್ಲಿ ಉದ್ಘಾಟನಾ ಪಂದ್ಯವನ್ನಾಡಿದ್ದ ಆರ್​ಸಿಬಿ, ಮುಂಬೈ ಇಂಡಿಯನ್ಸ್‌ ವಿರುದ್ಧ 2 ವಿಕೆಟ್​ಗಳಿಂದ ಗೆಲುವು ಸಾಧಿಸಿತ್ತು.  ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ 159 ರನ್ ಬಾರಿಸಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿತ್ತು.

6 / 8
2024 ರ ಐಪಿಎಲ್ ಆವೃತ್ತಿಯಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ಉದ್ಘಾಟನಾ ಪಂದ್ಯ ನಡೆದಿತ್ತು.  ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್​ಸಿಬಿ 173 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಎಸ್​ಕೆ 6 ವಿಕೆಟ್​ಗಳ ಜಯ ಸಾಧಿಸಿತ್ತು.

7 / 8
ಇನ್ನು 2025 ರ ಆವೃತ್ತಿಯಲ್ಲೂ ಆರ್​ಸಿಬಿ, ಕೆಕೆಆರ್​ ವಿರುದ್ಧ ಉದ್ಘಾಟನಾ ಪಂದ್ಯವನ್ನಾಡಿತ್ತು.  ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೆಕೆಆರ್ 174 ರನ್ ಬಾರಿಸಿದರೆ, ಗುರಿ ಬೆನ್ನಟ್ಟಿದ ಆರ್​ಸಿಬಿ 16.2 ಓವರ್​ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತ್ತು.

8 / 8
Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!

ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ

ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ

ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?

ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ

ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್

ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ