AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ತವರು ಮೈದಾನ: 2 ಸ್ಟೇಡಿಯಂಗಳಲ್ಲಿ ಕಣಕ್ಕಿಳಿಯಲಿದೆ RCB

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ​ಸಿ ಬಿ) ತಂಡವು ಮುಂದಿನ ಸೀಸನ್​ನಲ್ಲಿ ಹೊಸ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ತವರು ಮೈದಾನವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Jan 14, 2026 | 7:30 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಎರಡು ಉತ್ತರಗಳು ಕೇಳಿ ಬರುತ್ತಿದೆ. ಅದು ಕೂಡ ನವಿ ಮುಂಬೈ ಮತ್ತು ರಾಯ್​ಪುರ್ ಕಡೆಯಿಂದ.

1 / 6
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂದಿನ ಸೀಸನ್ ಗಾಗಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಬಾರಿ RCB ಕಣಕ್ಕಿಳಿಯುವುದು ಡೌಟ್.

2 / 6
2025ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ RCB ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಏರ್ಪಡಿಸಿತ್ತು. ಈ ವೇಳೆ ಉಂಟಾದ ಕಾಲ್ತುತಿದಿಂದಾಗಿ 11 ಮಂದಿ ಮೃತಪಟ್ಟಿದ್ದರು. ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

3 / 6
ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಮೂಲಸೌಕರ್ಯಗಳ ಕೊರತೆ ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಇದೇ ಕಾರಣದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಾಟವನ್ನು ನಿಷೇಧಿಸಲಾಗಿದೆ. ಅಲ್ಲದೆ ಮುಂಬರುವ ಐಪಿಎಲ್​ ಪಂದ್ಯಗಳಿಗೂ ಎನ್​ಒಸಿ ಸಿಗುವುದು ಅನುಮಾನ ಎನ್ನಲಾಗಿದೆ.

4 / 6
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನವಿ ಮುಂಬೈ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ಹೊಸ ತವರು ಮೈದಾನವಾಗಿ ಆಯ್ಕೆ ಮಾಡಿಕೊಂಡಿದೆ. ಅಲ್ಲದೆ ಈ ಸ್ಟೇಡಿಯಂನಲ್ಲಿ ಒಟ್ಟು 5 ಮ್ಯಾಚ್ ಗಳನ್ನು ಆಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.

5 / 6
ಇನ್ನುಳಿದ 2 ಹೋಮ್ ಮ್ಯಾಚ್ ಗಳನ್ನು ಚಂಡೀಗಢದ ರಾಯ್​ಪುರ್​ನಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲು ಪ್ಲ್ಯಾನ್ ರೂಪಿಸಲಾಗಿದೆ. ಅಂದರೆ ಈ ಬಾರಿ RCB ತನ್ನ ಹೋಮ್ ಮ್ಯಾಚ್ ಗಳನ್ನು ನವಿ‌ ಮುಂಬೈ ಮತ್ತು ರಾಯ್​ಪುರ್ ನಲ್ಲಿ ಆಡುವುದು ಬಹುತೇಕ ಖಚಿತ. ಅದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ ಮೇಲಿನ ನಿಷೇಧ ತೆರವಾದರೆ ಮಾತ್ರ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ

ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ

ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ

ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!

ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ

ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!