WPL ನಲ್ಲಿ RCB ಬೌಲರ್ಗಳ ರೆಡ್ ಅಲರ್ಟ್
WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 141 ರನ್ ಕಲೆಹಾಕಿದರೆ, ಆರ್ಸಿಬಿ ಪಡೆ ಈ ಗುರಿಯನ್ನು 16.2 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಸ್ಮೃತಿ ಮಂಧಾನ ಮುಂದಾಳತ್ವದ ಆರ್ಸಿಬಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on:Feb 18, 2025 | 9:24 AM

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಎದುರಾಳಿ ತಂಡವನ್ನು ಅತ್ಯಧಿಕ ಬಾರಿ ಆಲೌಟ್ ಮಾಡಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿಗೆ ಸೇರ್ಪಡೆಯಾಗಿದೆ. ಅದು ಸಹ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡದ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 19.3 ಓವರ್ಗಳಲ್ಲಿ 141 ರನ್ಗಳಿಗೆ ಆಲೌಟ್ ಮಾಡಿತ್ತು. ಈ ಆಲೌಟ್ನೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಅತೀ ಹೆಚ್ಚು ಬಾರಿ ಎದುರಾಳಿ ಪಡೆಯನ್ನು ಸರ್ವಪತನಗೊಳಿಸಿದ ತಂಡವೆಂಬ ಕೀರ್ತಿ ಆರ್ಸಿಬಿ ಪಾಲಾಯಿತು.

ಇದಕ್ಕೂ ಮುನ್ನ ಈ ದಾಖಲೆ ಹರ್ಮನ್ಪ್ರೀತ್ ಕೌರ್ ಮುಂದಾಳತ್ವದ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳ ಹೆಸರಿನಲ್ಲಿತ್ತು. ಮುಂಬೈ ಇಂಡಿಯನ್ಸ್ ತಂಡವು 20 ಪಂದ್ಯಗಳಲ್ಲಿ 3 ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿದೆ. ಹಾಗೆಯೇ ಯುಪಿ ವಾರಿಯರ್ಸ್ 18 ಮ್ಯಾಚ್ಗಳಲ್ಲಿ 3 ಬಾರಿ ಈ ಸಾಧನೆ ಮಾಡಿದೆ.

ಇದೀಗ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳನ್ನು ಹಿಂದಿಕ್ಕುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಆರ್ಸಿಬಿ ತಂಡವು 20 ಪಂದ್ಯಗಳಲ್ಲಿ ಒಟ್ಟು 4 ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿ ಹೊಸ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದೆ.

ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಅತೀ ಹೆಚ್ಚು ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿದ ಕೀರ್ತಿಯನ್ನು ಆರ್ಸಿಬಿ ತನ್ನದಾಗಿಸಿಕೊಂಡಿದೆ. ಇದೀಗ 20 ಪಂದ್ಯಗಳಲ್ಲಿ 10 ಜಯದೊಂದಿಗೆ ಯಶಸ್ವಿ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆರ್ಸಿಬಿ, ಇದೇ ಗೆಲುವಿನ ನಾಗಾಲೋಟ ಮುಂದುವರೆಸಿದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (13 ಜಯ) ತಂಡಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಬಹುದು.
Published On - 9:04 am, Tue, 18 February 25



















