WPL ನಲ್ಲಿ RCB ಬೌಲರ್​ಗಳ ರೆಡ್ ಅಲರ್ಟ್

|

Updated on: Feb 18, 2025 | 9:24 AM

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 141 ರನ್​ ಕಲೆಹಾಕಿದರೆ, ಆರ್​ಸಿಬಿ ಪಡೆ ಈ ಗುರಿಯನ್ನು 16.2 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಸ್ಮೃತಿ ಮಂಧಾನ ಮುಂದಾಳತ್ವದ ಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

1 / 5
ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಎದುರಾಳಿ ತಂಡವನ್ನು ಅತ್ಯಧಿಕ ಬಾರಿ ಆಲೌಟ್​ ಮಾಡಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿಗೆ ಸೇರ್ಪಡೆಯಾಗಿದೆ. ಅದು ಸಹ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡದ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 5
ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಆರ್​ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 19.3 ಓವರ್​ಗಳಲ್ಲಿ 141 ರನ್​ಗಳಿಗೆ ಆಲೌಟ್ ಮಾಡಿತ್ತು. ಈ ಆಲೌಟ್​ನೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ಹೆಚ್ಚು ಬಾರಿ ಎದುರಾಳಿ ಪಡೆಯನ್ನು ಸರ್ವಪತನಗೊಳಿಸಿದ ತಂಡವೆಂಬ ಕೀರ್ತಿ ಆರ್​ಸಿಬಿ ಪಾಲಾಯಿತು.

3 / 5
ಇದಕ್ಕೂ ಮುನ್ನ ಈ ದಾಖಲೆ ಹರ್ಮನ್​ಪ್ರೀತ್ ಕೌರ್ ಮುಂದಾಳತ್ವದ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳ ಹೆಸರಿನಲ್ಲಿತ್ತು. ಮುಂಬೈ ಇಂಡಿಯನ್ಸ್ ತಂಡವು 20 ಪಂದ್ಯಗಳಲ್ಲಿ 3 ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿದೆ. ಹಾಗೆಯೇ ಯುಪಿ ವಾರಿಯರ್ಸ್ 18 ಮ್ಯಾಚ್​ಗಳಲ್ಲಿ 3 ಬಾರಿ ಈ ಸಾಧನೆ ಮಾಡಿದೆ.

4 / 5
ಇದೀಗ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳನ್ನು ಹಿಂದಿಕ್ಕುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಆರ್​ಸಿಬಿ ತಂಡವು 20 ಪಂದ್ಯಗಳಲ್ಲಿ ಒಟ್ಟು 4 ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿ ಹೊಸ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದೆ.

5 / 5
ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ಹೆಚ್ಚು ಬಾರಿ ಎದುರಾಳಿ ತಂಡವನ್ನು ಆಲೌಟ್ ಮಾಡಿದ ಕೀರ್ತಿಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ. ಇದೀಗ 20 ಪಂದ್ಯಗಳಲ್ಲಿ 10 ಜಯದೊಂದಿಗೆ ಯಶಸ್ವಿ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆರ್​ಸಿಬಿ, ಇದೇ ಗೆಲುವಿನ ನಾಗಾಲೋಟ ಮುಂದುವರೆಸಿದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ (13 ಜಯ) ತಂಡಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಬಹುದು.

Published On - 9:04 am, Tue, 18 February 25