AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡ ಮಾರಾಟ..?

RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ಐಪಿಎಲ್​ನ ಮಾಜಿ ಅಧ್ಯಕ್ಷರು ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 30, 2025 | 12:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಬದಲಾಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ, ಐಪಿಎಲ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಮುಂದಿಟ್ಟಿರುವ ಹೊಸ ಸುದ್ದಿ.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ. ಈ ಹಿಂದೆ ಆರ್​ಸಿಬಿ ಇಂತಹ ಸುದ್ದಿಯನ್ನು ನಿರಾಕರಿಸಿತ್ತು. ಆದರೆ ಇದೀಗ ಆರ್​ಸಿಬಿ ಮಾಲೀಕರು  ತಮ್ಮ ಬ್ಯಾಲೆನ್ಸ್ ಶೀಟ್‌ನಿಂದ ತೆಗೆದು ಮಾರಾಟ ಮಾಡಲು ನಿರ್ಧರಿಸಿದ್ದಾರೆಂದು ತೋರುತ್ತಿದೆ.

2 / 6
ಆರ್​ಸಿಬಿ ತಂಡಕ್ಕೆ ಅಪಾರ ಅಭಿಮಾನಿಗಳಿದ್ದಾರೆ. ಇದೀಗ ತಂಡ ಚಾಂಪಿಯನ್ ಪಟ್ಟವನ್ನು ಸಹ ಅಲಂಕರಿಸಿದೆ. ಹೀಗಾಗಿ ಉತ್ತಮ ನಿರ್ವಹಣಾ ತಂಡವನ್ನು ಫ್ರಾಂಚೈಸಿ ಹೊಂದಿದೆ. ಇದೇ ಕಾರಣದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಸಂಪೂರ್ಣ ಶೇರು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಆಸಕ್ತಿ ತೋರಿದೆ.

3 / 6
ಅಲ್ಲದೆ ಐಪಿಎಲ್ 2026 ಕ್ಕೂ ಮುನ್ನ ಒಟ್ಟಾರೆಯಾಗಿ ಲಭ್ಯವಿರುವ ಏಕೈಕ ತಂಡವಾಗಿ ಆರ್​ಸಿಬಿ ಮಾರಾಟವಾಗಬಹುದು. ಬಿಗ್ ಗ್ಲೋಬಲ್ ಫಂಡ್‌ಗಳಲ್ಲಿ ಒಂದು ಅಥವಾ ಬೃಹತ್ ಹೂಡಿಕೆದಾರರು ಆರ್​ಸಿಬಿ ತಂಡವನ್ನು ಖರೀದಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತದಲ್ಲಿ ಹೂಡಿಕೆ ಮಾಡಲು ಇದಕ್ಕಿಂತ ಉತ್ತಮ ಅವಕಾಶ ಇನ್ನೊಂದಿಲ್ಲ. ಅದನ್ನು ಬಳಸಿಕೊಳ್ಳುವ ಯಾರಿಗಾದರೂ ಶುಭವಾಗಲಿ ಎಂದು ಲಲಿತ್ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

4 / 6
ಇದಕ್ಕೂ ಮುನ್ನ ಜುಲೈ ತಿಂಗಳಲ್ಲಿ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲಾಗುತ್ತದೆ ಎಂದು ವರದಿಯಾಗಿತ್ತು. ಅದು ಕೂಡ ಸುಮಾರು 2 ಬಿಲಿಯನ್ ಡಾಲರ್​ಗೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ.ಗೆ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಆ ಬಳಿಕ ಈ ಸುದ್ದಿಯನ್ನು ಆರ್​ಸಿಬಿ ನಿರಾಕರಿಸಿತ್ತು.

5 / 6
ಇದೀಗ ಲಲಿತ್ ಮೋದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ತೆರೆ ಮರೆಯ ಸಿದ್ಧತೆಗಳು ಶುರುವಾಗಿದೆ. ಈ ಮಾರಾಟಕ್ಕಾಗಿ ಸಿಟಿ ಬ್ಯಾಂಕ್ ಮಧ್ಯವರ್ತಿಯಾಗಿ ಕಾರ್ಯ ನಿರ್ವಹಿಸಲಿದೆ ಎಂಬುದನ್ನು ಸಹ ಖಚಿತಪಡಿಸಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್-19 ಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರಾಟವಾದರೂ ಅಚ್ಚರಿಪಡಬೇಕಿಲ್ಲ.

6 / 6
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ

600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!

ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ

ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು

ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ

ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ

ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ

ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​