- TV9 Kannada Kannada News Photos Cricket Photos RCB Player Anuj Rawat Smashes Century in DY Patil T20 Cup
6 ಭರ್ಜರಿ ಸಿಕ್ಸ್, 14 ಫೋರ್: ಸ್ಪೋಟಕ ಸೆಂಚುರಿ ಸಿಡಿಸಿದ RCB ಆಟಗಾರ
IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಆರ್ಸಿಬಿ ತಂಡದ ಆಟಗಾರರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದು ಶುಭ ಸೂಚನೆ ಎನ್ನಬಹುದು.
Updated on: Feb 29, 2024 | 10:57 AM

ಮುಂಬೈನಲ್ಲಿ ನಡೆಯುತ್ತಿರುವ ಡಿವೈ ಪಾಟೀಲ್ ಟಿ20 ಕಪ್ ಟೂರ್ನಿಯಲ್ಲಿ ಯುವ ಎಡಗೈ ದಾಂಡಿಗ ಅನೂಜ್ ರಾವತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಬ್ಯಾಂಕ್ ಆಫ್ ಬರೋಡಾ ವಿರುದ್ಧದ ಈ ಪಂದ್ಯದಲ್ಲಿ ಇನ್ಕಮ್ ಟ್ಯಾಕ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

ಅದರಂತೆ ಆರಂಭಿಕನಾಗಿ ಕಣಕ್ಕಿಳಿದ ಅನೂಜ್ ರಾವತ್ ಹಾಗೂ ಅಭಿಷೇಕ್ ದಾಸ್ (31) ಇನ್ಕಮ್ ಟ್ಯಾಕ್ಸ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ನೊಂದಿಗೆ ಅಬ್ಬರಿಸಿದ ರಾವತ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಗೈದರು.

ಈ ಮೂಲಕ 57 ಎಸೆತಗಳನ್ನು ಎದುರಿಸಿದ ಅನೂಜ್ ರಾವತ್ 6 ಭರ್ಜರಿ ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ ಅಜೇಯ 116 ರನ್ ಸಿಡಿಸಿದರು. ಅನೂಜ್ ಅವರ ಈ ಭರ್ಜರಿ ಶತಕದ ನೆರವಿನಿಂದ ಇನ್ಕಮ್ ಟ್ಯಾಕ್ಸ್ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 238 ರನ್ ಕಲೆಹಾಕಿತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಬ್ಯಾಂಕ್ ಆಫ್ ಬರೋಡಾ ತಂಡದ ಪರ ಕನ್ನಡಿಗ ರೋಹನ್ ಕದಮ್ 45 ರನ್ ಬಾರಿಸಿದರು. ಇದಾಗ್ಯೂ ಇತರೆ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಂತಿಮವಾಗಿ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್ಗಳಿಸುವ ಮೂಲಕ 40 ರನ್ಗಳಿಂದ ಸೋಲೊಪ್ಪಿಕೊಂಡಿತು.

ಅಂದಹಾಗೆ ಅನೂಜ್ ರಾವತ್ ಕಳೆದ ಎರಡು ಸೀಸನ್ಗಳಿಂದ ಆರ್ಸಿಬಿ ಪರ ಕಣಕ್ಕಿಳಿಯುತ್ತಿದ್ದಾರೆ. RCB ಪರ 17 ಪಂದ್ಯಗಳನ್ನಾಡಿರುವ ರಾವತ್ ಒಟ್ಟು 220 ರನ್ ಕಲೆಹಾಕಿದ್ದಾರೆ. ಇದೀಗ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಯುವ ಎಡಗೈ ದಾಂಡಿಗ ಈ ಬಾರಿ ಕೂಡ ಆರ್ಸಿಬಿ ಪರ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

TV9 Kannada
Read More