Lockie Ferguson: ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಆಟಗಾರ
IPL 2024: ಈ ಬಾರಿಯ ಐಪಿಎಲ್ನಲ್ಲಿ ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯಲಿದ್ದಾರೆ. ಕಳೆದ ಸೀಸನ್ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಲಾಕಿ ಫರ್ಗುಸನ್ ಅವರನ್ನು ಈ ಬಾರಿ RCB 2 ಕೋಟಿ ರೂ. ನೀಡಿ ಖರೀದಿಸಿದೆ. ಅದರಂತೆ ನ್ಯೂಝಿಲೆಂಡ್ ವೇಗಿ ಚೊಚ್ಚಲ ಬಾರಿಗೆ ಆರ್ಸಿಬಿ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
Updated on: Feb 10, 2024 | 8:34 AM

ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಲಾಕಿ ಫರ್ಗುಸನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಎಮ್ಮಾ ಕೊಮೊಕಿ ಜೊತೆ ವೈವಾಹಿಕ ಜೀವನವನ್ನು ಆರಂಭಿಸಿರುವುದಾಗಿ ಫರ್ಗುಸನ್ ತಿಳಿಸಿದ್ದಾರೆ.

ಲಾಕಿ ಫರ್ಗುಸನ್-ಎಮ್ಮಾ ಕೊಮೊಕಿ ಫೆಬ್ರವರಿ 2 ರಂದೇ ವಿವಾಹವಾಗಿದ್ದರು. ಆದರೆ ಈ ವಿಚಾರವನ್ನು ಎಲ್ಲೂ ಬಹಿರಂಗಪಡಿಸಿರಲಿಲ್ಲ. ಇದೀಗ ಮದುವೆ ಫೋಟೋಗಳನ್ನು ಲಾಕಿ ಫರ್ಗುಸನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಮಿಸೆಸ್ ಫರ್ಗುಸನ್ ಅವರನ್ನು ಪರಿಚಯಿಸಿದ್ದಾರೆ.

ಲಾಕಿ ಫರ್ಗುಸನ್ ಅವರ ಈ ವಿವಾಹ ಸಮಾರಂಭದಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಕಾಣಿಸಿಕೊಂಡಿದ್ದರು. ಅಲ್ಲದೆ ನ್ಯೂಝಿಲೆಂಡ್ ತಂಡದ ಆಟಗಾರರು ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಆಡುತ್ತಿರುವ ಕಾರಣ ಈ ಶುಭ ಸಮಾರಂಭಕ್ಕೆ ಗೈರಾಗಿದ್ದರು.

ಇನ್ನು ಈ ವಿವಾಹದಲ್ಲಿ ಲಾಕಿ ಫರ್ಗುಸನ್ ಕಪ್ಪು-ಬಿಳಿ ಕ್ಲಾಸಿಕ್ ಸೂಟ್ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಎಮ್ಮಾ ಕೊಮೊಕಿ ಏಂಜೆಲ್ ಗೌನ್ನಲ್ಲಿ ಮಿಂಚಿದ್ದರು. ಇದೀಗ ಫರ್ಗುಸನ್ ದಂಪತಿಯ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಂದಹಾಗೆ ಲಾಕಿ ಫರ್ಗುಸನ್ ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿಯಲಿದ್ದಾರೆ. ಈ ಬಾರಿಯ ಹರಾಜಿನಲ್ಲಿ ನ್ಯೂಝಿಲೆಂಡ್ ವೇಗಿಯನ್ನು ಆರ್ಸಿಬಿ ಬರೋಬ್ಬರಿ 2 ಕೋಟಿ ರೂ. ನೀಡಿ ಖರೀದಿಸಿದೆ.

150 Kmph ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ ಹೊಂದಿರುವ ಲಾಕಿ ಫರ್ಗುಸನ್ ಅವರ ಎಂಟ್ರಿಯು ಆರ್ಸಿಬಿ ತಂಡದ ಬೌಲಿಂಗ್ ಬಲವನ್ನು ಹೆಚ್ಚಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ RCB ಬೌಲರ್ಗಳಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

TV9 Kannada
Read More




