- Kannada News Photo gallery Cricket photos RCB Playing XI vs DC: Wanindu Hasaranga Return To RCB Playing 11
IPL 2023: RCB ತಂಡದಲ್ಲಿ 1 ಬದಲಾವಣೆ ಖಚಿತ: ಆಡುವ ಬಳಗದಲ್ಲಿ ಯಾರಿಗೆ ಸಿಗಲಿದೆ ಚಾನ್ಸ್?
RCB Playing XI vs DC: ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರು. ಹೀಗಾಗಿ ಇಬ್ಬರು ಬೌಲರ್ಗಳಲ್ಲಿ ಒಬ್ಬರನ್ನು ಕೈ ಬಿಡಬೇಕಾಗುತ್ತದೆ.
Updated on: Apr 13, 2023 | 9:23 PM

IPL 2023 RCB vs PBKS: ಐಪಿಎಲ್ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಏಕೆಂದರೆ ಮೊದಲ ಮೂರು ಪಂಧ್ಯಗಳಿಂದ ಹೊರಗುಳಿದಿದ್ದ ಆರ್ಸಿಬಿ ತಂಡದ ಸ್ಟಾರ್ ಸ್ಪಿನ್ ಆಲ್ರೌಂಡರ್ ವನಿಂದು ಹಸರಂಗ ತಂಡಕ್ಕೆ ಮರಳಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಏಕೆಂದರೆ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ತಂಡದ ಅಗ್ರ ಕ್ರಮಾಂಕದ ಬ್ಯಾಟರ್ಗಳು ಉತ್ತಮ ಪ್ರದರ್ಶನ ನೀಡಿದರೂ ಮಧ್ಯಮ ಕ್ರಮಾಂಕದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹಾಗೆಯೇ ಸಿರಾಜ್ ಅವರನ್ನು ಹೊರತುಪಡಿಸಿದರೆ ಬೌಲರ್ಗಳು ಕೂಡ ಸಂಪೂರ್ಣ ವಿಫಲರಾಗಿದ್ದರು. ಹೀಗಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಲು ಮುಂದಾಗಬಹುದು.

ಅದರಂತೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಡೇವಿಡ್ ವಿಲ್ಲಿ ಅಥವಾ ವೇಯ್ನ್ ಪಾರ್ನೆಲ್ ಇವರಿಬ್ಬರಲ್ಲಿ ಒಬ್ಬರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇಲ್ಲಿ ವಿಲ್ಲಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ಅವರ ಬದಲು ಹಸರಂಗ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

1- ಫಾಫ್ ಡುಪ್ಲೆಸಿಸ್ (ನಾಯಕ)

2- ವಿರಾಟ್ ಕೊಹ್ಲಿ

4- ಮಹಿಪಾಲ್ ಲೊಮ್ರೋರ್

3- ಗ್ಲೆನ್ ಮ್ಯಾಕ್ಸ್ವೆಲ್

5- ದಿನೇಶ್ ಕಾರ್ತಿಕ್

6- ಅನೂಜ್ ರಾವತ್

7- ವನಿಂದು ಹಸರಂಗ

5- ಶಹಬಾಝ್ ಅಹ್ಮದ್

9- ಹರ್ಷಲ್ ಪಟೇಲ್

10- ಮೊಹಮ್ಮದ್ ಸಿರಾಜ್

ಅದರಂತೆ ವೇಯ್ನ್ ಪಾರ್ನೆಲ್ ಬದಲು ಜೋಶ್ ಹ್ಯಾಝಲ್ವುಡ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಅವರು ಫಿಟ್ನೆಸ್ ಸಮಸ್ಯೆ ಹೊಂದಿದ್ದರೆ ಡೇವಿಡ್ ವಿಲ್ಲಿಗೆ ಅವಕಾಶ ಸಿಗಬಹುದು.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.



















