IPL 2025: ಮೊದಲಾರ್ಧ ಮುಕ್ತಾಯ: RCB ಪ್ಲೇಆಫ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?

Updated on: Apr 19, 2025 | 9:54 AM

IPL 2025 Rcb Playoff Scenario: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 7 ಪಂದ್ಯಗಳನ್ನಾಡಿದೆ. ಈ ಮ್ಯಾಚ್​ಗಳಲ್ಲಿ ಆರ್​ಸಿಬಿ 4 ಜಯ ಸಾಧಿಸಿದರೆ, ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಒಟ್ಟು 8 ಅಂಕಗಳನ್ನು ಪಡೆದಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

1 / 5
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೊದಲಾರ್ಧದ ಪಂದ್ಯಗಳು ಪೂರ್ಣಗೊಂಡಿದೆ. ಮೊದಲ ಸುತ್ತಿನಲ್ಲಿ ಆಡಿದ 7 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಗೆದ್ದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಈ ನಾಲ್ಕು ಪಂದ್ಯಗಳನ್ನು ಎದುರಾಳಿ ತಂಡಗಳ ತವರು ಮೈದಾನದಲ್ಲಿ ಗೆದ್ದಿರುವುದು ವಿಶೇಷ.

2 / 5
ಇದಾಗ್ಯೂ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡಕ್ಕೆ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಿಲ್ಲ. ತವರು ಮೈದಾನದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪಡೆ ಮುಗ್ಗರಿಸಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತರೆ, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಪರಾಜಯಗೊಂಡಿದೆ.

3 / 5
ಈ ಮೂರು ಸೋಲುಗಳೊಂದಿಗೆ ಮೊದಲಾರ್ಧ ಪೂರ್ಣಗೊಳಿಸಿರುವ ಆರ್​ಸಿಬಿ ಇದೀಗ ದ್ವಿತೀಯಾರ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಅದರಂತೆ ಏಪ್ರಿಲ್ 20 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯಾರ್ಧವನ್ನು ಆರಂಭಿಸಲಿದೆ. 

4 / 5
ಅದರಂತೆ ಆರ್​ಸಿಬಿ ತಂಡವು ದ್ವಿತೀಯಾರ್ಧದಲ್ಲಿ ಕಣಕ್ಕಿಳಿಯಲಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸುವುದು ಅನಿವಾರ್ಯ. ಏಕೆಂದರೆ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳ ಅವಶ್ಯಕತೆಯಿದೆ. ಸದ್ಯ 4 ಗೆಲುವುಗಳೊಂದಿಗೆ 8 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಮುಂದಿನ 7 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಪ್ಲೇಆಫ್​ಗೇರುವುದು ಖಚಿತವಾಗಲಿದೆ.

5 / 5
ವಿಶೇಷ ಎಂದರೆ ಎಂದರೆ ಆರ್​ಸಿಬಿ ತಂಡದ ಮುಂದಿನ 7 ಪಂದ್ಯಗಳಲ್ಲಿ 4 ಮ್ಯಾಚ್​ಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಬೇಕಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ತವರು ಮೈದಾನದ ಪಂದ್ಯಗಳು ತುಂಬಾ ಮಹತ್ವದ್ದು. ಈ ಪಂದ್ಯಗಳಲ್ಲಿ ಗೆಲುವು ದಾಖಲಿಸಿ, ಒಟ್ಟು 8 ಅಂಕಗಳನ್ನು ಪಡೆದರೆ ಮಾತ್ರ ಆರ್​ಸಿಬಿ ನೇರವಾಗಿ ಪ್ಲೇಆಫ್​ಗೇರಬಹುದು. ಇಲ್ಲದಿದ್ದರೆ ಇತರೆ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us