MI vs RCB, IPL 2023: ವಾಂಖೆಡೆಯಲ್ಲಿ ಆರ್​ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ: ಫೋಟೋ ನೋಡಿ

|

Updated on: May 09, 2023 | 12:10 PM

RCB: ಮುಂಬೈ ವಿರುದ್ಧದ ಪಂದ್ಯಕ್ಕೆ ಈಗಾಗಲೇ ವಾಂಖೆಡೆ ತಲುಪಿರುವ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಎಲ್ಲ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

1 / 7
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿರುವ ಐಪಿಎಲ್ 2023ರ 54ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗುತ್ತಿದೆ.

2 / 7
ಈಗಾಗಲೇ ವಾಂಖೆಡೆ ತಲುಪಿರುವ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಎಲ್ಲ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

3 / 7
ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾದರು. ಈ ಅಪೂರ್ವ ಸಮಾಗಮದ ಫೋಟೋಗಳನ್ನು ಆರ್​ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

4 / 7
ಉಭಯ ತಂಡಗಳು ಆಡಿದ ಆಡಿರುವ 10 ಪಂದ್ಯಗಳಲ್ಲಿ ತಲಾ ಐದು ಸೋಲು, ಗೆಲುವು ಸಾಧಿಸಿ 10 ಅಂಕ ಸಂಪಾದಿಸಿದೆ. ರನ್​ರೇಟ್ ಆಧಾರದ ಮೇಲೆ ಆರ್​ಸಿಬಿ ಆರನೇ ಸ್ಥಾನದಲ್ಲಿದ್ದರೆ ಮುಂಬೈ ಎಂಟನೇ ಸ್ಥಾನದಲ್ಲಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲೇರಲು ಎರಡೂ ತಂಡಕ್ಕೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯ.

5 / 7
ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಕಡೆಯಿಂದ ಮಾತ್ರ ಕೊಡುಗೆ ಬರುತ್ತಿದೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಮ್ಯಾಕ್ಸ್​ವೆಲ್ ಕಡೆಯಿಂದ ಕೂಡ ರನ್ ಬರಬೇಕು.

6 / 7
ಹಿಂದಿನ ಪಂದ್ಯಕ್ಕೆ ಕೇದರ್ ಜಾಧವ್ ಆಯ್ಕೆ ಆಗಿದ್ದರು. ಆದರೆ, ಪ್ಲೇಯಿಂಗ್ ಇಲೆವೆನ್​ನಲ್ಲಿ ಆಡಲು ಅವಕಾಶ ಸಿಕ್ಕಿರಲಿಲ್ಲ. ಬೌಲಿಂಗ್​ನಲ್ಲಿ ಆರ್​ಸಿಬಿ ಬೌಲರ್​ಗಳು ಕನ್ಸಿಸ್​ಟೆನ್ಸಿ ತೋರಿಸುತ್ತಿಲ್ಲ. ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹ್ಯಾಜ್ಲೆವುಡ್ ತಂತ್ರದೊಂದಿಗೆ ಬೌಲಿಂಗ್ ಮಾಡಬೇಕು.

7 / 7
ಬ್ಯಾಟರ್​ಗಳ ಸ್ವರ್ಗವಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರನ್ ಮಳೆ ಸುರಿಯುವುದು ಖಚಿತ. ಇದು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಕಲೆಹಾಕಬಹುದು.