Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಟಾರ್ಗೆಟ್ ಲಿಸ್ಟ್ ಔಟ್: ಕನ್ನಡಿಗನನ್ನು ಕಡೆಗಣಿಸಿರುವುದು ಬಹಿರಂಗ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-18 ರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮರಳಬೇಕೆಂದಿದ್ದ ಕೆಎಲ್ ರಾಹುಲ್ ಅವರನ್ನು ಈ ಬಾರಿ ಆರ್​​ಸಿಬಿ ಖರೀದಿಸಿಲ್ಲ. ಇದಾಗ್ಯೂ ಕನ್ನಡಿಗನಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬರೋಬ್ಬರಿ 14 ಕೋಟಿ ರೂ. ವ್ಯಯಿಸಿದೆ. ಅದರಂತೆ ಐಪಿಎಲ್ 2025 ರಲ್ಲಿ ರಾಹುಲ್ ಡೆಲ್ಲಿ ಪರ ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 11, 2024 | 11:53 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​​ ಸೀಸನ್-18 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಈ ಆಟಗಾರರಲ್ಲಿ ಮೂವರು ರಿಟೈನ್ ಆಗಿದ್ದರೆ, ಇನ್ನುಳಿದ 19 ಪ್ಲೇಯರ್ಸ್​​ಗಳನ್ನು ಮೆಗಾ ಹರಾಜಿನ ಮೂಲಕ ಖರೀದಿಸಲಾಗಿದೆ.

1 / 7
ಆದರೆ ಈ ಹರಾಜಿನಲ್ಲಿ ಕೆಎಲ್ ರಾಹುಲ್ ಅವರ ಖರೀದಿಗೆ ಆರ್​ಸಿಬಿ ಹೆಚ್ಚಿನ ಆಸಕ್ತಿ ತೋರದಿರುವುದು ಸ್ಪಷ್ಟವಾಗಿತ್ತು. ಏಕೆಂದರೆ ರಾಹುಲ್​ಗಾಗಿ 7 ಕೋಟಿ ರೂ.ಗಿಂತ ಅಧಿಕ ಮೊತ್ತ ವ್ಯಯಿಸಲು ಆರ್​ಸಿಬಿ ಮುಂದಾಗಿರಲಿಲ್ಲ. ಇದಕ್ಕೆ ಕಾರಣವೇನು ಎಂಬುದಕ್ಕೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದೆ.

2 / 7
ಆರ್​ಸಿಬಿ ತಂಡದ ಹರಾಜು ಟಾರ್ಗೆಟ್ ಲಿಸ್ಟ್ ಬಹಿರಂಗವಾಗಿದ್ದು, ಈ ಹರಾಜು ಪಟ್ಟಿಯಲ್ಲಿ ಕೆಎಲ್ ರಾಹುಲ್ ಅವರ ಹೆಸರು C ಪಟ್ಟಿಯಲ್ಲಿತ್ತು. ಅಂದರೆ ಆರ್​ಸಿಬಿ ಪಾಲಿಗೆ ರಾಹುಲ್ ಮೊದಲ ಆಯ್ಕೆ ಆಗಿರಲಿಲ್ಲ. ಹೀಗಾಗಿಯೇ ಕೆಎಲ್ ರಾಹುಲ್ ಅವರ ಖರೀದಿಗೆ ಆರ್​ಸಿಬಿ ಹೆಚ್ಚಿನ ಆಸಕ್ತಿ ತೋರಲಿಲ್ಲ.

3 / 7
ಹೀಗಾಗಿ 7 ಕೋಟಿ ರೂ. ಬಳಿಕ ಆರ್​ಸಿಬಿ ಫ್ರಾಂಚೈಸಿ ಕನ್ನಡಿಗನಿಗಾಗಿ ಬಿಡ್ ಮಾಡಲು ಮುಂದಾಗಿಲ್ಲ. ಇದರೊಂದಿಗೆ ತವರು ತಂಡದ ಪರ ಕಣಕ್ಕಿಳಿಯಬೇಕೆಂಬ ಕೆಎಲ್ ರಾಹುಲ್ ಅವರ ಬಹುಕಾಲದ ಕನಸು ಕಮರಿತು. ಇತ್ತ ರಾಹುಲ್ ಕಂಬ್ಯಾಕ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ಕೂಡ ನಿರಾಸೆಗೊಂಡರು.

4 / 7
ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ಖರೀದಿಸಿದೆ. ಇದಕ್ಕೆ ಕಾರಣ 6ನೇ ಕ್ರಮಾಂಕಕ್ಕಾಗಿ ಜಿತೇಶ್ ಶರ್ಮಾರನ್ನು ಆರ್​ಸಿಬಿ ಮೊದಲೇ ಟಾರ್ಗೆಟ್ ಮಾಡಿತ್ತು.

5 / 7
ಹೀಗಾಗಿ ಯುವ ವಿಕೆಟ್ ಕೀಪರ್​ ಬ್ಯಾಟರ್​​ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬರೋಬ್ಬರಿ 11 ಕೋಟಿ ರೂ. ವ್ಯಯಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ವಿಕೆಟ್ ಕೀಪರ್​​ಗಳಾಗಿ ಫಿಲ್ ಸಾಲ್ಟ್ ಹಾಗೂ ಜಿತೇಶ್ ಶರ್ಮಾ ಕಾಣಿಸಿಕೊಂಡಿದ್ದಾರೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

7 / 7
Follow us
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್

ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ

‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು

ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ

ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು

ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ

ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ