AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RCB: ಐಪಿಎಲ್‌ನಲ್ಲಿ ಹೊಸ ಇತಿಹಾಸ ರಚಿಸಲು ಆರ್​ಸಿಬಿಗೆ ಸುವರ್ಣಾವಕಾಶ

RCB vs SRH IPL 2026: ಆರ್‌ಸಿಬಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಎಸ್‌ಆರ್‌ಎಚ್ ವಿರುದ್ಧ ಸೆಣಸಲಿದೆ. ಪ್ಲೇಆಫ್ ಸ್ಥಾನ ಖಚಿತಪಡಿಸಿಕೊಂಡಿರುವ ಆರ್‌ಸಿಬಿ, ಗೆಲುವಿನೊಂದಿಗೆ ಲೀಗ್ ಮುಗಿಸಲು ಎದುರು ನೋಡುತ್ತಿದೆ. ಈ ಪಂದ್ಯ ಗೆದ್ದರೆ ಆರ್‌ಸಿಬಿಗೆ ಅಗ್ರಸ್ಥಾನ ಸಿಗಲಿದ್ದು, ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ 10 ಲೀಗ್ ಗೆಲುವುಗಳ ದಾಖಲೆ ಬರೆಯಲಿದೆ. ಸನ್‌ರೈಸರ್ಸ್‌ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಯತ್ನದಲ್ಲಿದೆ.

ಪೃಥ್ವಿಶಂಕರ
|

Updated on: May 22, 2026 | 6:31 PM

Share
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈಗಾಗಲೇ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿರುವ ಆರ್‌ಸಿಬಿ, ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗೆಲುವಿನೊಂದಿಗೆ ಲೀಗ್ ಹಂತವನ್ನು ಮುಗಿಸಲು ಎದುರು ನೋಡುತ್ತಿದೆ (PC- RCB X).

1 / 5
ಈ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ನಿರ್ಣಾಯಕ ಪಂದ್ಯವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಅಗ್ರಸ್ಥಾನದಲ್ಲೇ ಉಳಿಯಲಿದೆ. ಇದರ ಜೊತೆಗೆ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ಮಾಡಲು ಸಾಧ್ಯವಾಗದ ದಾಖಲೆಯನ್ನು ನಿರ್ಮಿಸುವ ಅವಕಾಶವಿದೆ (PC- RCB X).

2 / 5
ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದರೆ, ಇದು ಈ ಆವೃತ್ತಿಯಲ್ಲಿ ಆರ್​ಸಿಬಿ ತಂಡದ 10 ನೇ ಗೆಲುವು ಆಗಲಿದೆ. ಈ ಮೂಲಕ ಐಪಿಎಲ್‌ನ ಒಂದು ಆವೃತ್ತಿಯ ಲೀಗ್ ಹಂತದಲ್ಲಿ ಮೊದಲ ಬಾರಿಗೆ 10 ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಬರೆಯಲಿದೆ (PC- RCB X).

3 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಸ್ತುತ 13 ಪಂದ್ಯಗಳಿಂದ ಒಂಬತ್ತು ಗೆಲುವುಗಳನ್ನು ಹೊಂದಿದ್ದು, 18 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಇದೀಗ ಲೀಗ್ ಹಂತವನ್ನು ಅಗ್ರ ಎರಡು ಸ್ಥಾನಗಳಲ್ಲಿ ಮುಗಿಸುವ ಗುರಿಯನ್ನು ಹೊಂದಿದೆ (PC- RCB X).

4 / 5
ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಎರಡನೇ ಮುಖಾಮುಖಿ ಇದಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಿಂದಿನ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಹೀಗಾಗಿ ಸನ್‌ರೈಸರ್ಸ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ (PC- RCB X).

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us