AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ RCB

IPL 2026 RCB vs MI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 222 ರನ್​ಗಳಿಸಿ, 18 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಟಿ20 ಕ್ರಿಕೆಟ್​ನಲ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Apr 13, 2026 | 7:31 AM

Share
IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತವಾಗಿ ಬೃಹತ್ ಸ್ಕೋರ್​ಗಳಿಸುವ ಮೂಲಕ. ಅಲ್ಲದೆ ಅದೇ ಪಂದ್ಯಗಳಲ್ಲಿ ಬೃಹತ್ ಸ್ಕೋರ್​ ಹೊಡೆಸಿಕೊಳ್ಳುವ ಮೂಲಕ..!

1 / 6
ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ 4 ಪಂದ್ಯಗಳಲ್ಲಿ 200+ ಸ್ಕೋರ್​ಗಳಿಸಿದೆ. ಅಲ್ಲದೆ ಈ ನಾಲ್ಕು ಮ್ಯಾಚ್​ಗಳಲ್ಲೂ ಆರ್​ಸಿಬಿ ತಂಡ 200 ಕ್ಕಿಂತ ಹೆಚ್ಚಿನ ರನ್​​ಗಳನ್ನು ಬೆಟ್ಟು ಕೊಟ್ಟಿದೆ.

2 / 6
ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಸತತ 4 ಪಂದ್ಯಗಳಲ್ಲಿ 200+ ಸ್ಕೋರ್​ಗಳಿಸಿ, ಅದೇ ಪಂದ್ಯಗಳಲ್ಲಿ ಸತತವಾಗಿ 200+ ರನ್​ಗಳನ್ನು ಬಿಟ್ಟು ಕೊಟ್ಟ ವಿಶ್ವದ ಮೊದಲ ತಂಡವೆಂಬ ಅಪರೂಪದ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರ್ಮಿಸಿದೆ.

3 / 6
ಇದಕ್ಕೂ ಮುನ್ನ 2023 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಸತತ ನಾಲ್ಕು ಪಂದ್ಯಗಳಲ್ಲಿ 200ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಬ್ಯಾಟಿಂಗ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಹಾಗೆಯೇ 2024 ರಲ್ಲಿ ಆಸ್ಟ್ರೇಲಿಯಾ ತಂಡವು ಸತತವಾಗಿ 4 ಮ್ಯಾಚ್​ಗಳಲ್ಲಿ 200+ ರನ್‌ಗಳನ್ನು ಎದುರಾಳಿಗಳಿಗೆ ಬಿಟ್ಟು ಕೊಡುವ ಮೂಲಕ ಬೌಲಿಂಗ್​ನಲ್ಲಿ ಹೀನಾಯ ದಾಖಲೆ ನಿರ್ಮಿಸಿದ್ದರು.

4 / 6
ಆದರೆ ಈ ಎರಡು ದಾಖಲೆಗಳನ್ನು ಜೊತೆಯಾಗಿ ಬರೆಯುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಸತತವಾಗಿ 4 ಮ್ಯಾಚ್​ಗಳಲ್ಲಿ 200+ ಸ್ಕೋರ್​ಗಳಿಸಿ, ಪ್ರತಿ ಪಂದ್ಯಗಳಲ್ಲೂ 200 ಕ್ಕಿಂತ ಅಧಿಕ ರನ್​ ಹೊಡೆಸಿಕೊಂಡ ವಿಶ್ವದ ಏಕೈಕ ತಂಡವೆಂಬ ಹೆಗ್ಗಳಿಕೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

5 / 6
ಈ ಬಾರಿಯ ಐಪಿಎಲ್​​ನಲ್ಲಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 201 ರನ್ ನೀಡಿ, 203 ರನ್​ಗಳಿಸಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ 250 ರನ್ ಬಾರಿಸಿದ್ದರು. ಆದರೆ ಇದೇ ಪಂದ್ಯದಲ್ಲಿ 207 ರನ್​ಗಳನ್ನು ಬಿಟ್ಟುಕೊಟ್ಟಿದ್ದರು. ಹಾಗೆಯೇ ಮೂರನೇ ಪಂದ್ಯದಲ್ಲಿ ಆರ್​ಸಿಬಿ ಕಲೆಹಾಕಿದ್ದು 201 ರನ್​ಗಳು. ಈ ಸ್ಕೋರ್​ ಅನ್ನು ರಾಜಸ್ಥಾನ್ ರಾಯಲ್ಸ್ ಚೇಸ್ ಮಾಡಿದ್ದರು. ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 240 ರನ್​ಗಳಿಸಿ, 222 ರನ್​ಗಳನ್ನು ಹೊಡೆಸಿಕೊಂಡಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಆರ್​ಸಿಬಿ ತಂಡವು 'ಡಬಲ್ ಸೆಂಚುರಿ'ಯ ವಿಶೇಷ ದಾಖಲೆ ನಿರ್ಮಿಸಿದೆ.

6 / 6
Follow Us
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ

ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ

ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ

ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು

ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು

'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?