- Kannada News Photo gallery Cricket photos RCB Virat Kohli Glenn Maxwell and other players begun their preparations for IPL 2023 at the Chinnaswamy Stadium
RCB 2023: ಚಿನ್ನಸ್ವಾಮಿಯಲ್ಲಿ ಕೊಹ್ಲಿ, ಮ್ಯಾಕ್ಸ್ವೆಲ್, ಡುಪ್ಲೆಸಿಸ್ ಭರ್ಜರಿ ಅಭ್ಯಾಸ: ಫೋಟೋ ನೋಡಿ
IPL 2023: ಐಪಿಎಲ್ 2023ಕ್ಕಾಗಿ ಆರ್ಸಿಬಿಯ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್, ನಾಯಕ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
Updated on:Mar 28, 2023 | 8:33 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಮೂರು ದಿನವಷ್ಟೇ ಬಾಕಿಯಿದೆ. ಮಾರ್ಚ್ 31 ರಂದು ಈ ಮಿಲಿಯನ್ ಡಾಲರ್ ಟೂರ್ನಿಗೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾಟ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ ಆಗಲಿದೆ.

ಪ್ರತಿ ಬಾರಿ ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಕಣಕ್ಕಿಳಿಯುವ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ.

ಈಗಾಗಲೇ ಹೊಸ ಜೆರ್ಸಿಯನ್ನು ಅನಾವರಣ ಮಾಡಿರುವ ಆರ್ಸಿಬಿ ಮೊದಲ ಪಂದ್ಯಕ್ಕೆ ಸಜ್ಜಾಗುತ್ತಿದೆ. ತಂಡದ ಬಹುತೇಕ ಎಲ್ಲ ಆಟಗಾರರು ಕ್ಯಾಂಪ್ ಸೇರಿಕೊಂಡಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್, ನಾಯಕ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್.

ಹರ್ಷಲ್ ಪಟೇಲ್ ಬೌಲಿಂಗ್ ಅಭ್ಯಾಸ ನಡೆಸಿದರೆ, ದಿನೇಶ್ ಕಾರ್ತಿಕ್, ಅನುಜ್ ರಾವತ್ ನೆಟ್ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು. ಆರ್ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯದ ಟಿಕೆಟ್ ಖರೀದಿಗೆ ಸಿಗುತ್ತಿದ್ದು ಬಹುತೇಕ ಸೋಲ್ಡ್ ಔಟ್ ಆಗಿದೆ. ಆರ್ಸಿಬಿಯ ಅಧಿಕೃತ ವೆಬ್ಸೈಟ್ನಲ್ಲಿ ಟಿಕೆಟ್ ಮಾರಾಟ ನಡೆಯುತ್ತಿದೆ.

ಆರ್ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಮೈಕೆಲ್ ಬ್ರೇಸ್ವೆಲ್, ಮನೋಜ್ ಭಾಂಡಗೆ, ಸೋನು ಯಾದವ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ.
Published On - 8:33 am, Tue, 28 March 23
