IPL 2023: RCB vs CSK ಪಂದ್ಯದಲ್ಲಿ 6 ದಾಖಲೆಗಳು ನಿರ್ಮಾಣ

IPL 2023 Kannada: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್​ ಕಲೆಹಾಕಿತು.

TV9 Web
| Updated By: ಝಾಹಿರ್ ಯೂಸುಫ್

Updated on:Apr 18, 2023 | 5:31 PM

IPL 2023:  RCB vs CSK ಪಂದ್ಯದಲ್ಲಿ 6 ದಾಖಲೆಗಳು ನಿರ್ಮಾಣ IPL 2023 RCB vs CSK: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ-ಸಿಎಸ್​ಕೆ ನಡುವಣ ಹೈವೋಲ್ಟೇಜ್ ಕದನದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದೆ.

1 / 9
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್​ ಕಲೆಹಾಕಿತ್ತು. ಈ ಬೃಹತ್ ಮೊತ್ತವನ್ನು ಚೇಸ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 218 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಸ್​ಕೆ ತಂಡವು 8 ವಿಕೆಟ್​​ಗಳ ಜಯ ಸಾಧಿಸಿತು.

2 / 9
ಇನ್ನು ಈ ಪಂದ್ಯದ ಮುಕ್ತಾಯದೊಂದಿಗೆ ಹಲವು ದಾಖಲೆಗಳು ಕೂಡ ನಿರ್ಮಾಣವಾಯಿತು. ಆ ದಾಖಲೆಗಳು ಯಾವುವು ಎಂಬುದರ ಸಂಕ್ಷಿಪ್ತ ವಿವರಗಳು ಈ ಕೆಳಗಿನಂತಿದೆ.

3 / 9
ಅತ್ಯಧಿಕ ಸ್ಕೋರ್: ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಮೂಡಿಬಂದ ಒಟ್ಟು ಸ್ಕೋರ್ 444 ರನ್​ಗಳು. ಇದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೂಡಿಬಂದ ಐಪಿಎಲ್​ನ ಗರಿಷ್ಠ ಸ್ಕೋರ್. ಇದಕ್ಕೂ ಮುನ್ನ ಆರ್​ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದಲ್ಲಿ 425 ರನ್​ ಮೂಡಿಬಂದಿತ್ತು.

4 / 9
ಸಿಎಸ್​ಕೆ ಗರಿಷ್ಠ ಸ್ಕೋರ್: ಈ ಪಂದ್ಯದಲ್ಲಿ ಸಿಎಸ್‌ಕೆ ಗಳಿಸಿದ ಮೊತ್ತವು ಐಪಿಎಲ್‌ನಲ್ಲಿ ಅವರ ಮೂರನೇ ಗರಿಷ್ಠ ಮೊತ್ತವಾಗಿದೆ. 2010ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 5 ವಿಕೆಟ್‌ಗೆ 246 ರನ್ ಗಳಿಸಿದ್ದು ಸರ್ವಕಾಲಿಕ ದಾಖಲೆಯಾಗಿದೆ. ಹಾಗೆಯೇ 2008ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ವಿರುದ್ಧ 5 ವಿಕೆಟ್‌ಗೆ 240 ರನ್ ಗಳಿಸಿದ್ದು ಸಿಎಸ್​ಕೆ ತಂಡದ ಎರಡನೇ ಗರಿಷ್ಠ ಸ್ಕೋರ್. ಇದೀಗ 226 ರನ್​ಗಳಿಸುವ ಮೂಲಕ 3ನೇ ಬಾರಿ ಬೃಹತ್ ಮೊತ್ತ ಪೇರಿಸಿದೆ.

5 / 9
ಆರ್​ಸಿಬಿ ವಿರುದ್ಧ ಗರಿಷ್ಠ ಸ್ಕೋರ್: 226 ರನ್​ಗಳು ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ ಸಿಎಸ್​ಕೆ ಕಲೆಹಾಕಿದ ಗರಿಷ್ಠ ಸ್ಕೋರ್ ದಾಖಲೆಯಾಗಿದೆ.

6 / 9
ಸಿಎಸ್​ಕೆ ವಿರುದ್ಧ ಆರ್​ಸಿಬಿಯ ಗರಿಷ್ಠ ಸ್ಕೋರ್: 218 ರನ್​ ಬಾರಿಸುವ ಮೂಲಕ ಆರ್​ಸಿಬಿ ಕೂಡ ಸಿಎಸ್​ಕೆ ವಿರುದ್ಧ ತನ್ನ ಗರಿಷ್ಠ ಸ್ಕೋರ್ ಕಲೆಹಾಕಿದೆ.

7 / 9
17 ಸಿಕ್ಸ್​ಗಳು: ಈ ಪಂದ್ಯದಲ್ಲಿ ಸಿಎಸ್​ಕೆ ಬ್ಯಾಟ್ಸ್​ಮನ್​ಗಳು ಒಟ್ಟು 17 ಸಿಕ್ಸ್​ಗಳನ್ನು ಬಾರಿಸಿದ್ದರು. ಇದು ಐಪಿಎಲ್ ಪಂದ್ಯವೊಂದರಲ್ಲಿ ಮೂಡಿಬಂದ ಗರಿಷ್ಠ ಸಿಕ್ಸ್​ಗಳ ದಾಖಲೆಯಾಗಿದೆ. 2018 ಮತ್ತು 2022 ರಲ್ಲ್ಲೂ ಸಿಎಸ್​ಕೆ ಬ್ಯಾಟರ್​ಗಳು 17 ಸಿಕ್ಸ್​ಗಳನ್ನು ಬಾರಿಸಿದ್ದರು. ಇದೀಗ ಹಳೆಯ ದಾಖಲೆಯನ್ನು ಪುನರಾವರ್ತಿಸಿದ್ದಾರೆ.

8 / 9
33 ಸಿಕ್ಸ್​ಗಳು: ಆರ್​ಸಿಬಿ-ಸಿಎಸ್​ಕೆ ಪಂದ್ಯದಲ್ಲಿ 33 ಸಿಕ್ಸ್​ಗಳು ಮೂಡಿಬಂದಿವೆ. ಇದು ಐಪಿಎಲ್ ಪಂದ್ಯವೊಂದರಲ್ಲಿ ಜಂಟಿ ಗರಿಷ್ಠ ಸಿಕ್ಸ್​ಗಳ ದಾಖಲೆಯಾಗಿದೆ. 2018 ರಲ್ಲಿ ಬೆಂಗಳೂರಿನಲ್ಲಿ RCB vs CSK, ಮತ್ತು 2020 ರಲ್ಲಿ ಶಾರ್ಜಾದಲ್ಲಿ RR vs CSK ಪಂದ್ಯದಲ್ಲೂ 33 ಸಿಕ್ಸ್​ಗಳು ಮೂಡಿಬಂದಿತ್ತು.

9 / 9

Published On - 5:30 pm, Tue, 18 April 23

Follow us
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ

6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​

ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?

ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು

ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ

ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ