- Kannada News Photo gallery Cricket photos RCB vs GT IPL 2023 M Chinnaswamy Stadium Pitch Report Bengaluru weather forecast on Sunday Kannada News
RCB vs GT Pitch Report: ಆರ್ಸಿಬಿ-ಜಿಟಿ ರಣರೋಚಕ ಕದನಕ್ಕೆ ಚಿನ್ನಸ್ವಾಮಿ ರೆಡಿ: ಪಿಚ್ ಹೇಗಿದೆ ನೋಡಿ
RCB vs GT, IPL 2023: ಸಾಕಷ್ಟು ಕುತೂಹಲ ಕೆರಳಿಸಿರುವ ಆರ್ಸಿಬಿ-ಜಿಟಿ ಪಂದ್ಯಕ್ಕೆ ಅಭಿಮಾನಿಗಳು ಕಾದುಕುಳಿತಿದ್ದಾರೆ. ಆರ್ಸಿಬಿ-ಜಿಟಿ ಪಂದ್ಯದ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬಗ್ಗೆ ನೋಡುವುದಾದರೆ ಇದು ಸಂಪೂರ್ಣ ಬ್ಯಾಟಿಂಗ್ ಪಿಚ್ ಎನ್ನಬಹುದು.
Updated on: May 21, 2023 | 9:28 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಇಂದು ಎರಡು ರಣರೋಚಕ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಮುಂಬೈ-ಹೈದರಾಬಾದ್ ಮುಖಾಮುಖಿ ಆದರೆ, ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ.

ಮಧ್ಯಾಹ್ನ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಹೈದರಾಬಾದ್ ಪಂದ್ಯದಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು. ಅಂತೆಯೆ 2ನೇ ಪಂದ್ಯದಲ್ಲಿ ಆರ್ಸಿಬಿ ಜಯ ಸಾಧಿಸಿದರೆ ಮುಂಬೈ ತಂಡವನ್ನು ಹಿಂದಿಕ್ಕಿ ಆರ್ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು. ಹೀಗಾದರೆ ಆರ್ಸಿಬಿ ಪ್ಲೇ ಆಫ್ ಪ್ರವೇಶಿಸಲಿದೆ.

ಹೀಗೆ ಸಾಕಷ್ಟು ಕುತೂಹಲ ಕೆರಳಿಸಿರುವ ಈ ಪಂದ್ಯಕ್ಕೆ ಅಭಿಮಾನಿಗಳು ಕಾದುಕುಳಿತಿದ್ದಾರೆ. ಆರ್ಸಿಬಿ-ಜಿಟಿ ಪಂದ್ಯದ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬಗ್ಗೆ ನೋಡುವುದಾದರೆ ಇದು ಸಂಪೂರ್ಣ ಬ್ಯಾಟಿಂಗ್ ಪಿಚ್ ಎನ್ನಬಹುದು.

ಚಿನ್ನಸ್ವಾಮಿ ಪಿಚ್ ಟ್ರ್ಯಾಕ್ ಅತ್ಯುತ್ತಮವಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಇಂದು ಹೈ ಸ್ಕೋರ್ ಪಂದ್ಯ ಆಗುವುದು ಖಚಿತ. ಅಲ್ಲದೆ ಇಲ್ಲಿ ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಫೋರ್-ಸಿಕ್ಸರ್ಗಳ ಮಳೆ ಸುರಿಯಲಿದೆ.

ಬೌಲರ್ಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್ ಮಾಡಿ ಗೆಲುವು ಸಾಧಿಸಿಬಹುದು. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವುದು ಉತ್ತಮ.

ಇನ್ನು ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆಯಿಂದ ಮಧ್ಯರಾತ್ರಿಯವರೆಗೂ ಮೋಡ ಕವಿದ ವಾತವರಣ ಇರಲಿದ್ದು, ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಹೀಗಾಗಿಯೇ ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆರ್ಸಿಬಿ ಮತ್ತು ಜಿಟಿ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
