IPL 2023: ಫಿಟ್​ನೆಸ್ ಹೊಂದಿದ್ದರೂ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯದಿರಲು ಕಾರಣವೇನು?

IPL 2023 Kannada: ವಿರಾಟ್ ಕೊಹ್ಲಿ (ನಾಯಕ) , ಶಹಬಾಝ್ ಅಹ್ಮದ್ , ಗ್ಲೆನ್ ಮ್ಯಾಕ್ಸ್ ವೆಲ್ , ಮಹಿಪಾಲ್ ಲೊಮ್ರೋರ್ , ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ) , ಸುಯಶ್ ಪ್ರಭುದೇಸಾಯಿ , ವನಿಂದು ಹಸರಂಗ , ಡೇವಿಡ್ ವಿಲ್ಲಿ.

TV9 Web
| Updated By: ಝಾಹಿರ್ ಯೂಸುಫ್

Updated on: Apr 26, 2023 | 9:12 PM

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿಲ್ಲ. ಇದರ ಬೆನ್ನಲ್ಲೇ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೂ ಆಸ್ಟ್ರೇಲಿಯಾ ವೇಗಿ ಕಣಕ್ಕಿಳಿಯದಿರಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 7
ಇದಕ್ಕೆ ಮುಖ್ಯ ಕಾರಣ ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಸಿಗದ ಅನುಮತಿ. ಅಂದರೆ ಆಸೀಸ್ ಆಟಗಾರರು ಯಾವುದೇ ಲೀಗ್​ನಲ್ಲೂ ಭಾಗವಹಿಸುವ ಮುನ್ನ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾಗುತ್ತದೆ. ಇಲ್ಲಿ ಫ್ರಾಂಚೈಸಿಯ ಆಕಾಂಕ್ಷೆಗಿಂತ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತನ್ನ ಆಟಗಾರರ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತದೆ.

2 / 7
ಇದೀಗ ಜೋಶ್ ಹ್ಯಾಝಲ್​​ವುಡ್ ವಿಷಯದಲ್ಲೂ ಕ್ರಿಕೆಟ್ ಆಸ್ಟ್ರೇಲಿಯಾ ಅಂತಹದೊಂದು ನಿರ್ಧಾರ ತೆಗೆದುಕೊಂಡಿದೆ. ಇಲ್ಲಿ ಆಸೀಸ್ ವೇಗಿ ಫಿಟ್​ನೆಸ್ ಹೊಂದಿದ್ದರೂ ಕೆಲ ವಿಷಯಗಳಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಂತೃಪ್ತಿಯನ್ನು ಹೊಂದಿಲ್ಲ. ಹೀಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಹ್ಯಾಝಲ್​ವುಡ್ ಫಿಟ್​ನೆಸ್ ಕ್ಲಿಯರೆನ್ಸ್​ಗಾಗಿ ಸಹಿ ಹಾಕಲು ಹಿಂದೇಟು ಹಾಕಿದೆ.

3 / 7
ಇದೇ ಕಾರಣದಿಂದಾಗಿ ಜೋಶ್ ಹ್ಯಾಝಲ್​ವುಡ್ ಕೆಕೆಆರ್ ವಿರುದ್ಧದ ಪಂದ್ಯದ ಆಯ್ಕೆಗೆ ಲಭ್ಯರಿರಲಿಲ್ಲ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಅನ್ನು ಗಮದಲ್ಲಿರಿಸಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಆಟಗಾರರ ಫಿಟ್​ನೆಸ್ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತಿದ್ದು, ಹೀಗಾಗಿ ಹ್ಯಾಝಲ್​ವುಡ್​ಗೆ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಂತೆ ಆಡಲು ಅನುಮತಿ ನೀಡಿಲ್ಲ. ಬದಲಾಗಿ ಒಂದಷ್ಟು ಅಭ್ಯಾಸಗಳ ಬಳಿಕ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ.

4 / 7
ಇತ್ತ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ಹ್ಯಾಝಲ್​ವುಡ್ ಲಭ್ಯರಿರಲಿದ್ದಾರೆ ಎಂದು RCB ಬೌಲಿಂಗ್ ಕೋಚ್ ಗ್ರಿಫಿತ್ ತಿಳಿಸಿದ್ದಾರೆ.

5 / 7
ಅಂದಹಾಗೆ ಬಾರ್ಡರ್-ಗವಾಸ್ಕರ್ ಸರಣಿ ವೇಳೆ ಮೊಣಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ಜೋಶ್ ಹ್ಯಾಝಲ್​ವುಡ್ ಇಡೀ ಸರಣಿಯಿಂದ ಹೊರಗುಳಿದಿದ್ದರು. ಅಲ್ಲದೆ ಇದೇ ಕಾರಣದಿಂದ ಐಪಿಎಲ್​ನ ಮೊದಲಾರ್ಧದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಬೌಲಿಂಗ್ ಅಭ್ಯಾಸ ಆರಂಭಿಸಿದರೂ, ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಫಿಟ್​ನೆಸ್ ಕ್ಲಿಯರೆನ್ಸ್ ಲಭಿಸಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.

6 / 7
KKR ವಿರುದ್ಧ RCB ಪ್ಲೇಯಿಂಗ್ 11: ವಿರಾಟ್ ಕೊಹ್ಲಿ (ನಾಯಕ) , ಶಹಬಾಝ್ ಅಹ್ಮದ್ , ಗ್ಲೆನ್ ಮ್ಯಾಕ್ಸ್ ವೆಲ್ , ಮಹಿಪಾಲ್ ಲೊಮ್ರೋರ್ , ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ) , ಸುಯಶ್ ಪ್ರಭುದೇಸಾಯಿ , ವನಿಂದು ಹಸರಂಗ , ಡೇವಿಡ್ ವಿಲ್ಲಿ , ವಿಜಯ್ ಕುಮಾರ್ ವೈಶಾಕ್ , ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್ (ಇಂಪ್ಯಾಕ್ಟ್ ಪ್ಲೇಯರ್).

7 / 7
Follow us
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್

ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು

ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ