RCB vs LSG, IPL 2023: ಆರ್ಸಿಬಿ-ಎಲ್ಎಸ್ಜಿ ಪಂದ್ಯಕ್ಕೆ ಮಳೆಯ ಕಾಟ?: ಚಿನ್ನಸ್ವಾಮಿ ಪಿಚ್ ಯಾರಿಗೆ ಸಹಕಾರಿ ಆಗುತ್ತೆ?
Chinnaswami Stadium: ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಟ್ರ್ಯಾಕ್ ಅತ್ಯುತ್ತಮವಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಆರ್ಸಿಬಿ- ಲಖನೌ ಮಧ್ಯೆ ಇಂದು ಹೈ ಸ್ಕೋರ್ ಪಂದ್ಯ ಆಗುವುದು ಖಚಿತ
1 / 7
ಐಪಿಎಲ್ 2023ರ 15ನೇ ಪಂದ್ಯದಲ್ಲಿ ಇಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.
2 / 7
ರಾಯಲ್ ಚಾಲೆಂಜರ್ಸ್ ತಂಡ ಆಡಿದ ಎರಡು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಗೆದ್ದರೆ ದ್ವಿತೀಯ ಮ್ಯಾಚ್ನಲ್ಲಿ ಸೋಲುಂಡಿತ್ತು. ಕೆಕೆಆರ್ ವಿರುದ್ಧ ಆಡಿದ ಎರಡನೇ ಪಂದ್ಯದಲ್ಲಿ ಆರ್ಸಿಬಿ ಬ್ಯಾಟಿಂಗ್-ಬೌಲಿಂಗ್ನಲ್ಲಿ ಹೀನಾಯ ಪ್ರದರ್ಶನ ತೋರಿತ್ತು.
3 / 7
ಹಿಂದಿನ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿ ಪಡಿಸಿ ಆರ್ಸಿಬಿ ಇಂದು ಉತ್ತಮ ಪ್ರದರ್ಶನ ನೀಡಿದ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ಫಾಫ್ ಪಡೆಯ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಶಹಬಾಜ್ ಅಹಮದ್ ಬದಲು ಮಹಿಪಾಲ್ ಲೊಮ್ರೂರ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
4 / 7
ಇನ್ನು ಬೆಂಗಳೂರಿನಲ್ಲಿ ಇಂದಿನ ತಾಪಮಾನ 20 ರಿಂದ 33 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೀಗಾಗಿ ಪಂದ್ಯಕ್ಕೆ ಯಾವುದೇ ರೀತಿಯ ಮಳೆಯ ಅಡಚಣೆ ಇರುವುದಿಲ್ಲ. ಸಂಪೂರ್ಣ ಓವರ್ಗಳ ಪಂದ್ಯವನ್ನು ಅಭಿಮಾನಿಗಳು ವೀಕ್ಷಿಸಬಹುದು.
5 / 7
ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಟ್ರ್ಯಾಕ್ ಅತ್ಯುತ್ತಮವಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಇಂದು ಹೈ ಸ್ಕೋರ್ ಪಂದ್ಯ ಆಗುವುದು ಖಚಿತ. ಅಲ್ಲದೆ ಇಲ್ಲಿ ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಫೋರ್-ಸಿಕ್ಸರ್ಗಳ ಮಳೆ ಸುರಿಯಲಿದೆ.
6 / 7
ಬೌಲರ್ಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್ ಮಾಡಿ ಗೆಲುವು ಸಾಧಿಸಿಬಹುದು. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವುದು ಉತ್ತಮ.
7 / 7
ಆರ್ಸಿಬಿ ಮತ್ತು ಲಖನೌ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
Published On - 10:20 am, Mon, 10 April 23