- Kannada News Photo gallery Cricket photos RCB vs MI IPL 2023 the ticket price list for Royal Challengers Bangalore home games is out Kannada News
RCB vs MI: ಭರ್ಜರಿ ಸೇಲ್ ಆಗುತ್ತಿದೆ ಆರ್ಸಿಬಿ-ಮುಂಬೈ ಪಂದ್ಯದ ಟಿಕೆಟ್: ಖಾಲಿಯಾಗುವ ಮುನ್ನ ಬುಕ್ ಮಾಡಿ
IPL 2023: ಈ ಬಾರಿ ಕಪ್ ಗೆಲ್ಲುವ ನಿರೀಕ್ಷೆಯಲ್ಲಿರುವ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ. ಇದೀಗ ಈ ಪಂದ್ಯದ ಟಿಕೆಟ್ ಖರೀದಿಗೆ ಸಿಗುತ್ತಿದೆ.
Updated on:Mar 16, 2023 | 10:46 AM

ಭಾರತದಲ್ಲಿ ದೇಶೀಯ ಟೂರ್ನಿಗಳ ಹಬ್ಬ ಆರಂಭವಾಗಿದೆ. ಸದ್ಯ ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ನಡೆಯುತ್ತಿದ್ದು ರೋಚಕತೆ ಸೃಷ್ಟಿಸಿದೆ. ಇದಾದ ಬಳಿಕ ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಚಾಲನೆ ಸಿಗಲಿದೆ. ಈಗಾಗಲೇ ವೇಳಾಪಟ್ಟಿ ಪ್ರಕಟಗೊಂಡಿದ್ದು ಮಾರ್ಚ್ 31 ರಂದು ಮೊದಲ ಪಂದ್ಯ ಏರ್ಪಡಿಸಲಾಗಿದೆ.

ಈ ಬಾರಿ ಕಪ್ ಗೆಲ್ಲುವ ನಿರೀಕ್ಷೆಯಲ್ಲಿರುವ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ. ಇದೀಗ ಈ ಪಂದ್ಯದ ಟಿಕೆಟ್ ಖರೀದಿಗೆ ಸಿಗುತ್ತಿದೆ.

ಆರ್ಸಿಬಿಯ ಅಧಿಕೃತ ವೆಬ್ಸೈಟ್ನಲ್ಲಿ ಟಿಕೆಟ್ ಮಾರಾಟ ಶುರುವಾಗಿದೆ. ಆರಂಭಿಕ ಬೆಲೆ 2,310 ರೂ. ಯಿಂದ ಇದ್ದು 42,000 ರೂ. ವರೆಗಿನ ಟಿಕೆಟ್ ಖರೀದಿಗೆ ಲಭ್ಯವಿದೆ. ಈಗಾಗಲೇ ಬಹುತೇಕ ಟಿಕೆಟ್ ಸೋಲ್ಡ್ ಔಟ್ ಆಗಿದ್ದು ಕೂಡಲೇ ಖರೀದಿಸಿದರೆ ಬುಕ್ ಮಾಡಬಹುದು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎಲ್ಲ ಪಂದ್ಯದ ಟಿಕೆಟ್ ಈಗಲೇ ಬುಕ್ ಮಾಡಲು ಆರ್ಸಿಬಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಆರ್ಸಿಬಿ vs ಮುಂಬೈ ಟಿಕೆಟ್ ಬೆಲೆ ಇಂತಿದೆ: 2310 ರೂ., 3300ರೂ., 4840ರೂ., 6049ರೂ., 9075ರೂ., 10890ರೂ., 24200ರೂ., 42350ರೂ.

ಇದರ ನಡುವೆ ಟೂರ್ನಿ ಆರಂಭಕ್ಕೂ ಮುನ್ನ ಆರ್ಸಿಬಿಗೆ ಆಘಾತ ಉಂಟಾಗಿದೆ. ಇಂಗ್ಲೆಂಡ್ನ ಯುವ ಆಲ್ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಆರ್ಸಿಬಿ ಇವರನ್ನು ಹರಾಜಿನಲ್ಲಿ ಬರೋಬ್ಬರಿ 3.2 ಕೋಟಿ ನೀಡಿ ಖರೀದಿಸಿತ್ತು. ಇದೀಗ ಗಾಯಗೊಂಡಿರುವುದರಿಂದ ವಿಲ್ ಜಾಕ್ಸ್ ಐಪಿಎಲ್ನಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ.

ಆರ್ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್ವೆಲ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ರಜತ್ ಪಾಟಿದಾರ್, ಶಹಬಾಜ್ ಅಹಮದ್, ಸಿದ್ಧಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹಿಮಾಂಶು ಶರ್ಮಾ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವನಿಂದು ಹಸರಂಗ, ಮನೋಜ್ ಭಾಂಡಗೆ, ರಾಜನ್ ಕುಮಾರ್, ಜೋಶ್ ಹೇಜಲ್ವುಡ್, ಕರಣ್ ಶರ್ಮಾ, ರೀಸ್ ಟೋಪ್ಲಿ, ಅವಿನಾಶ್ ಸಿಂಗ್, ಸೋನು ಯಾದವ್, ಆಕಾಶ್ ದೀಪ್.

ಮಾರ್ಚ್ 31 ರಂದು ಈ ಮಿಲಿಯನ್ ಡಾಲರ್ ಟೂರ್ನಿಗೆ ಚಾಲನೆ ಸಿಗಲಿದ್ದು ಮೇ 28 ಕ್ಕೆ ಫೈನಲ್ ಪಂದ್ಯ ನಡೆಯುವ ಮೂಲಕ ಅಂತ್ಯಗೊಳ್ಳಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣೆಸಾಟ ನಡೆಸಲಿದೆ.
Published On - 10:46 am, Thu, 16 March 23




