- Kannada News Photo gallery Cricket photos RCB vs PBKS IPL 2023 Here is the photos of Punjab Kings and Royal Challengers Bangalore IPL 2023 Match
PBKS vs RCB, IPL 2023: ಆರ್ಸಿಬಿ-ಪಂಜಾಬ್ ಕಿಂಗ್ಸ್ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ
Virat Kohli: ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ನಾಯತ್ವದ ಜವಾಬ್ದಾರಿ ಹೊತ್ತಿದ್ದರು. ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬರೋಬ್ಬರಿ 137 ರನ್ಗಳ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.
Updated on:Apr 21, 2023 | 9:38 AM

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಮೋಘ ಪ್ರದರ್ಶನ ತೋರಿ ಗೆಲುವಿನ ಲಯಕ್ಕೆ ಮರಳಿತು. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೀಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್ನಲ್ಲಿ ಬೆಂಗಳೂರು 24 ರನ್ಗಳ ಜಯ ಸಾಧಿಸಿತು.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ನಾಯತ್ವದ ಜವಾಬ್ದಾರಿ ಹೊತ್ತಿದ್ದರು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ಸಿಬಿಗೆ ಓಪನರ್ಗಳಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬರೋಬ್ಬರಿ 137 ರನ್ಗಳ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.

ಕೊಹ್ಲಿ 47 ಎಸೆತಗಳಿಂದ 5 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 59 ರನ್ ಗಳಿಸಿದರೆ, ಡುಪ್ಲೆಸಿಸ್ ಕೇವಲ 56 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಮೂಲಕ 84 ರನ್ ಗಳಿಸಿ ರಿಟಾರ್ಡ್ ಆದರು. ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು.

ಸವಾಲಿನ ಟಾರ್ಗೆಟ್ ಬೆನ್ನತ್ತಿದ ಪಂಜಾಬ್ ಆರಂಭಿಕ ಆಘಾತ ಎದುರಿಸಿತು. ಅಥರ್ವ 4 ರನ್ ಗಳಿಸಿ ಔಟಾದರೆ, ಮ್ಯಾಥ್ಯೂ ಶಾರ್ಟ್ 8, ಲಿಯಾಮ್ ಲಿವಿಂಗ್ಸ್ಟೋನ್ 2, ಹರ್ಪ್ರೀತ್ ಸಿಂಗ್ 13, ನಾಯಕ ಸ್ಯಾಮ್ ಕುರ್ರನ್ 10 ರನ್ ಹೀಗೆ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು.

ಪ್ರಭ್ ಸಿಮ್ರಾನ್ ಸಿಂಗ್ 30 ಎಸೆತದಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಮೂಲಕ 46 ರನ್ ಗಳಿಸಿದರೆ ಜಿತೇಶ್ ಶರ್ಮ 27 ಎಸೆತದಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಮೂಲಕ 41 ರನ್ ಪೇರಿಸಿದರು. ಆದರೆ, 18.2 ಓವರ್ಗಳಲ್ಲಿ 150 ರನ್ಗೆ ಆಲೌಟ್ ಆಗುವ ಮೂಲಕ ಸೋಲುಂಡಿತು.

ಬೆಂಗಳೂರು ಪರ ಮೊಹಮ್ಮದ್ ಸಿರಾಜ್ 21 ರನ್ ನೀಡಿ 4 ವಿಕೆಟ್ ಪಡೆದರೆ, ವನಿಂದು ಹಸರಂಗ 39 ರನ್ ನೀಡಿ 2 ವಿಕೆಟ್ ಪಡೆದರು. ವಿಜಯ್ಕುಮಾರ್ ವೈಶಾಖ್ ಮತ್ತು ಹರ್ಷಲ್ ಪಟೇಲ್ ತಲಾ 1 ವಿಕೆಟ್ ಕಿತ್ತು ಮಿಂಚಿದರು.

ಪಂದ್ಯ ಮುಗಿದ ಬಳಿಕ ಪಂಜಾಬ್ ಕಿಂಗ್ಸ್ ಮಾಲಕಿ ಜೊತೆ ಮಾತುಕತೆ ನಡೆಸುತ್ತಿರುವ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್.
Published On - 9:38 am, Fri, 21 April 23
