- Kannada News Photo gallery Cricket photos RCB W is the first team to go past 150 despite losing their 5 wickets for under 50
ಸೋಲಿನ ನಡುವೆಯೂ RCB ತಂಡದ ಭರ್ಜರಿ ದಾಖಲೆ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 184 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 15 ರನ್ಗಳ ಜಯ ಸಾಧಿಸಿದೆ.
Updated on:Jan 27, 2026 | 8:35 AM

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಮುಂಬೈ ಇಂಡಿಯನ್ಸ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನ್ಯಾಟ್ ಸೀವರ್ ಬ್ರಂಟ್ 57 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಪರಿಣಾಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಯು ಕೇವಲ 35 ರನ್ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಆರ್ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ದಿಟ್ಟ ಹೋರಾಟ ಪ್ರದರ್ಶಿಸಿದ್ದರು.

ಅದರಲ್ಲೂ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್ನೊಂದಿಗೆ 90 ರನ್ ಸಿಡಿಸಿದ್ದರು. ಈ ಮೂಲಕ ಆರ್ಸಿಬಿ ತಂಡವು 20 ಓವರ್ಗಳಲ್ಲಿ 184 ರನ್ಗಳಿಸಿ 15 ರನ್ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಈ ಸೋಲಿನ ಹೊರತಾಗಿಯೂ ಆರ್ಸಿಬಿ ತಂಡದ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಿದೆ.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 50 ಕ್ಕಿಂತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು 150 ಕ್ಕಿಂತ ಅಧಿಕ ರನ್ಗಳಿಸಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಆರ್ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 35 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಅಂತಿಮವಾಗಿ 184 ರನ್ಗಳಿಸಿ ಈ ವಿಶೇಷ ದಾಖಲೆಯನ್ನು ನಿರ್ಮಿಸಿದೆ.
Published On - 8:33 am, Tue, 27 January 26
