AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ನಡುವೆಯೂ RCB ತಂಡದ ಭರ್ಜರಿ ದಾಖಲೆ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 184 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 15 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:Jan 27, 2026 | 8:35 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ಮುಂಬೈ ಇಂಡಿಯನ್ಸ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನ್ಯಾಟ್ ಸೀವರ್ ಬ್ರಂಟ್ 57 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.

2 / 5
ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಪರಿಣಾಮ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪಡೆಯು ಕೇವಲ 35 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ದಿಟ್ಟ ಹೋರಾಟ ಪ್ರದರ್ಶಿಸಿದ್ದರು.

3 / 5
ಅದರಲ್ಲೂ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್​ನೊಂದಿಗೆ 90 ರನ್​ ಸಿಡಿಸಿದ್ದರು. ಈ ಮೂಲಕ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಿ 15 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಈ ಸೋಲಿನ ಹೊರತಾಗಿಯೂ ಆರ್​ಸಿಬಿ ತಂಡದ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಿದೆ.

4 / 5
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ 50 ಕ್ಕಿಂತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು 150 ಕ್ಕಿಂತ ಅಧಿಕ ರನ್​ಗಳಿಸಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 35 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಅಂತಿಮವಾಗಿ 184 ರನ್​ಗಳಿಸಿ ಈ ವಿಶೇಷ ದಾಖಲೆಯನ್ನು ನಿರ್ಮಿಸಿದೆ.

5 / 5

Published On - 8:33 am, Tue, 27 January 26