AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಗೆ ಧೋನಿ ನಾಯಕರಾಗಿದ್ರೆ, ಈಗಾಗಲೇ 3 ಕಪ್​ ಆದ್ರೂ ಗೆಲ್ಲುತ್ತಿತ್ತು: ವಾಸಿಂ ಅಕ್ರಂ

IPL 2023 Kannada: ಐಪಿಎಲ್​ 2023 ರಲ್ಲೂ ಆರ್​ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ.

TV9 Web
| Edited By: |

Updated on: May 08, 2023 | 3:57 PM

Share
IPL 2023: RCB ಗೆ ಧೋನಿ ನಾಯಕರಾಗಿದ್ರೆ, ಈಗಾಗಲೇ 3 ಕಪ್​ ಆದ್ರೂ ಗೆಲ್ಲುತ್ತಿತ್ತು: ವಾಸಿಂ ಅಕ್ರಂ

1 / 9
ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರೆ ಕನಿಷ್ಠ 3 ಕಪ್​ಗಳನ್ನಾದರೂ ಗೆಲ್ಲುತ್ತಿತ್ತು. ಹೀಗಂದಿದ್ದು ಮಾತ್ಯಾರೂ ಅಲ್ಲ, ಪಾಕಿಸ್ತಾನ ತಂಡದ ಮಾಜಿ ಆಟಗಾರ ವಾಸಿಂ ಅಕ್ರಮ್.

2 / 9
ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಾಸಿಂ ಅಕ್ರಮ್, ಆರ್​ಸಿಬಿ ಪ್ರತಿ ಸೀಸನ್​ನಲ್ಲೂ ಉತ್ತಮ ತಂಡವನ್ನೇ ರೂಪಿಸಿದೆ. ಆದರೆ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಅದರಲ್ಲೂ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ತಂಡವು ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ವಿಫಲವಾಗಿತ್ತು.

3 / 9
ಒಂದು ವೇಳೆ ಆರ್​ಸಿಬಿ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಏನಾದರೂ ಮುನ್ನಡೆಸಿದ್ದರೆ, ಈಗಾಗಲೇ 3 ಕಪ್​ಗಳನ್ನಾದರೂ ಗೆದ್ದಿರುತ್ತಿತ್ತು. ಏಕೆಂದರೆ ಧೋನಿ ಅತ್ಯುತ್ತಮ ನಾಯಕ. ಅವರಿಗೆ ತಂಡವನ್ನು ಯಾವ ಪರಿಸ್ಥಿತಿಯಲ್ಲಿ ಹೇಗೆ ಮುನ್ನಡೆಸಬೇಕೆಂದು ಚೆನ್ನಾಗಿ ತಿಳಿದಿದೆ ಎಂದು ಅಕ್ರಮ್ ಅಭಿಪ್ರಾಯಪಟ್ಟಿದ್ದಾರೆ.

4 / 9
ನನ್ನ ಪ್ರಕಾರ, ಮಹೇಂದ್ರ ಸಿಂಗ್ ಧೋನಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವಹಿಸಿದ್ದರೆ ಖಂಡಿತವಾಗಿಯೂ ಕನಿಷ್ಠ ಮೂರು ಕಪ್​ಗಳನ್ನಾದರೂ ಗೆಲ್ಲುತ್ತಿದ್ದರು ಎಂದು ವಾಸಿಂ ಅಕ್ರಮ್ ಹೇಳಿದ್ದಾರೆ.

5 / 9
ಅಂದಹಾಗೆ 2009 ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 6 ರನ್​ಗಳಿಂದ ಸೋಲುವ ಮೂಲಕ ಆರ್​ಸಿಬಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಕ್ಕುವ ಅವಕಾಶ ಕಳೆದುಕೊಂಡಿತು.

6 / 9
ಇದಾದ ಬಳಿಕ 2011 ರಲ್ಲಿ ಡೇನಿಯಲ್ ವೆಟ್ಟೋರಿ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಮತ್ತೆ ಫೈನಲ್​​ಗೆ ಪ್ರವೇಶಿಸಿತ್ತು. ಅಂದು ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 58 ರನ್​ಗಳಿಂದ ಸೋತು ಚಾಂಪಿಯನ್​ ಪಟ್ಟಕ್ಕೇರುವ ಅವಕಾಶವನ್ನು ರಾಯಲ್ ಚಾಲೆಂಜರ್ಸ್ ಹುಡುಗರು ಕೈಚೆಲ್ಲಿಕೊಂಡಿದ್ದರು.

7 / 9
ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಮೂರನೇ ಬಾರಿಗೆ ಫೈನಲ್​ಗೆ ಎಂಟ್ರಿ ಕೊಟ್ಟಿತ್ತು. ಆದರೆ ಅಂತಿಮ ಹಣಾಹಣಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ​ಕೇವಲ 8 ರನ್​ಗಳಿಂದ ಪರಾಜಯಗೊಳ್ಳುವ ಮೂಲಕ ಮೂರನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

8 / 9
ಇದೀಗ ಐಪಿಎಲ್​ 2023 ರಲ್ಲೂ ಆರ್​ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ. ಅಲ್ಲದೆ ನಾಲ್ಕರ ಘಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಈ ಬಾರಿ ಆರ್​ಸಿಬಿ 4ನೇ ಬಾರಿ ಫೈನಲ್ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

9 / 9
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ