IPL 2023: RCB ಗೆ ಧೋನಿ ನಾಯಕರಾಗಿದ್ರೆ, ಈಗಾಗಲೇ 3 ಕಪ್ ಆದ್ರೂ ಗೆಲ್ಲುತ್ತಿತ್ತು: ವಾಸಿಂ ಅಕ್ರಂ
TV9 Web | Updated By: ಝಾಹಿರ್ ಯೂಸುಫ್
Updated on:
May 08, 2023 | 3:57 PM
IPL 2023 Kannada: ಐಪಿಎಲ್ 2023 ರಲ್ಲೂ ಆರ್ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ.
1 / 9
2 / 9
ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರೆ ಕನಿಷ್ಠ 3 ಕಪ್ಗಳನ್ನಾದರೂ ಗೆಲ್ಲುತ್ತಿತ್ತು. ಹೀಗಂದಿದ್ದು ಮಾತ್ಯಾರೂ ಅಲ್ಲ, ಪಾಕಿಸ್ತಾನ ತಂಡದ ಮಾಜಿ ಆಟಗಾರ ವಾಸಿಂ ಅಕ್ರಮ್.
3 / 9
ವೆಬ್ಸೈಟ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಾಸಿಂ ಅಕ್ರಮ್, ಆರ್ಸಿಬಿ ಪ್ರತಿ ಸೀಸನ್ನಲ್ಲೂ ಉತ್ತಮ ತಂಡವನ್ನೇ ರೂಪಿಸಿದೆ. ಆದರೆ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಅದರಲ್ಲೂ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ತಂಡವು ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ವಿಫಲವಾಗಿತ್ತು.
4 / 9
ಒಂದು ವೇಳೆ ಆರ್ಸಿಬಿ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಏನಾದರೂ ಮುನ್ನಡೆಸಿದ್ದರೆ, ಈಗಾಗಲೇ 3 ಕಪ್ಗಳನ್ನಾದರೂ ಗೆದ್ದಿರುತ್ತಿತ್ತು. ಏಕೆಂದರೆ ಧೋನಿ ಅತ್ಯುತ್ತಮ ನಾಯಕ. ಅವರಿಗೆ ತಂಡವನ್ನು ಯಾವ ಪರಿಸ್ಥಿತಿಯಲ್ಲಿ ಹೇಗೆ ಮುನ್ನಡೆಸಬೇಕೆಂದು ಚೆನ್ನಾಗಿ ತಿಳಿದಿದೆ ಎಂದು ಅಕ್ರಮ್ ಅಭಿಪ್ರಾಯಪಟ್ಟಿದ್ದಾರೆ.
5 / 9
ನನ್ನ ಪ್ರಕಾರ, ಮಹೇಂದ್ರ ಸಿಂಗ್ ಧೋನಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವಹಿಸಿದ್ದರೆ ಖಂಡಿತವಾಗಿಯೂ ಕನಿಷ್ಠ ಮೂರು ಕಪ್ಗಳನ್ನಾದರೂ ಗೆಲ್ಲುತ್ತಿದ್ದರು ಎಂದು ವಾಸಿಂ ಅಕ್ರಮ್ ಹೇಳಿದ್ದಾರೆ.
6 / 9
ಅಂದಹಾಗೆ 2009 ರಲ್ಲಿ ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 6 ರನ್ಗಳಿಂದ ಸೋಲುವ ಮೂಲಕ ಆರ್ಸಿಬಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಕ್ಕುವ ಅವಕಾಶ ಕಳೆದುಕೊಂಡಿತು.
7 / 9
ಇದಾದ ಬಳಿಕ 2011 ರಲ್ಲಿ ಡೇನಿಯಲ್ ವೆಟ್ಟೋರಿ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್ಸಿಬಿ ಮತ್ತೆ ಫೈನಲ್ಗೆ ಪ್ರವೇಶಿಸಿತ್ತು. ಅಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 58 ರನ್ಗಳಿಂದ ಸೋತು ಚಾಂಪಿಯನ್ ಪಟ್ಟಕ್ಕೇರುವ ಅವಕಾಶವನ್ನು ರಾಯಲ್ ಚಾಲೆಂಜರ್ಸ್ ಹುಡುಗರು ಕೈಚೆಲ್ಲಿಕೊಂಡಿದ್ದರು.
8 / 9
ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್ಸಿಬಿ ಮೂರನೇ ಬಾರಿಗೆ ಫೈನಲ್ಗೆ ಎಂಟ್ರಿ ಕೊಟ್ಟಿತ್ತು. ಆದರೆ ಅಂತಿಮ ಹಣಾಹಣಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೇವಲ 8 ರನ್ಗಳಿಂದ ಪರಾಜಯಗೊಳ್ಳುವ ಮೂಲಕ ಮೂರನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.
9 / 9
ಇದೀಗ ಐಪಿಎಲ್ 2023 ರಲ್ಲೂ ಆರ್ಸಿಬಿ ತಂಡದ ಹೋರಾಟ ಮುಂದುವರೆದಿದೆ. ಆಡಿರುವ 10 ಪಂದ್ಯಗಳಲ್ಲಿ 5 ಜಯ ಸಾಧಿಸಿದೆ. ಇನ್ನುಳಿದಿರುವ 4 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ. ಅಲ್ಲದೆ ನಾಲ್ಕರ ಘಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಈ ಬಾರಿ ಆರ್ಸಿಬಿ 4ನೇ ಬಾರಿ ಫೈನಲ್ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.