AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 15ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 109 ರನ್​ಗಳು ಮಾತ್ರ. ಈ ಗುರಿಯನ್ನು 15.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದು ಈ ಬಾರಿಯ ಟೂರ್ನಿಯಲ್ಲಿ ಆರ್​ಸಿಬಿ ತಂಡದ ಮೊದಲ ಸೋಲು ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jan 25, 2026 | 8:00 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ.

1 / 6
ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ತಂಡವು ಗೆಲುವು ದಾಖಲಿಸಿದ್ದರೆ ನೇರವಾಗಿ ಫೈನಲ್​ಗೇರಬಹುದಿತ್ತು. ಆದರೆ ಇದೀಗ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂದಿನ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಅನಿವಾರ್ಯವಾಗಿ ಮಾರ್ಪಟ್ಟಿದೆ.

2 / 6
ವುಮೆನ್ಸ್ ಪ್ರೀಮಿಯರ್ ಲೀಗ್​ ಟೂರ್ನಿಯ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸುತ್ತದೆ. ಇನ್ನು 2ನೇ ಮತ್ತು 3ನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

3 / 6
ಇತ್ತ ಆರ್​ಸಿಬಿ ತಂಡವು ಈಗಾಗಲೇ 10 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇದೀಗ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಆರ್​ಸಿಬಿ ತಂಡವು ಮುಂದಿನ ಎರಡು ಮ್ಯಾಚ್​ಗಳಲ್ಲಿ ಒಂದು ಪಂದ್ಯದಲ್ಲಿ ಗೆದ್ದರೆ ಫೈನಲ್​ಗೆ ಪ್ರವೇಶಿಸಲಿದೆ.

4 / 6
ಏಕೆಂದರೆ ಆರ್​ಸಿಬಿ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡಕ್ಕೆ 12 ಅಂಕಗಳನ್ನು ಪಡೆಯಲು ಅವಕಾಶವಿಲ್ಲ. ಉಳಿದ ನಾಲ್ಕು ತಂಡಗಳು ಮುಂದಿನ ಎಲ್ಲಾ ಮ್ಯಾಚ್​ಗಳನ್ನು ಗೆದ್ದರೂ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಬಹುದು. ಹೀಗಾಗಿ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಗೆದ್ದರೆ ಫೈನಲ್​ಗೇರುವುದು ಖಚಿತ.

5 / 6
ಅದರಂತೆ ಜನವರಿ 26 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅಥವಾ ಜನವರಿ 29 ರಂದು ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಫೈನಲ್​ಗೆ ಪ್ರವೇಶಿಸುತ್ತದೆ. ಹೀಗಾಗಿ ನೇರವಾಗಿ ಫೈನಲ್​ಗೆ ಪ್ರವೇಶಿಸಲು ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದು ಮ್ಯಾಚ್ ಗೆಲ್ಲಲೇಬೇಕು.

6 / 6