RCBಯ ಒಂದೇ ಒಂದು ಪೋಸ್ಟ್​ಗೆ ವಿರಾಟ್ ಕೊಹ್ಲಿಯ ದಾಖಲೆ ಉಡೀಸ್..!

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 113 ರನ್​ಗಳಿಗೆ ಆಲೌಟ್ ಆಯಿತು. 114 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 19.3 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 18, 2024 | 11:54 AM

RCB ಅಭಿಮಾನಿಗಳ ಕಪ್ ಗೆಲ್ಲುವ ಕನಸು ಕೊನೆಗೂ ಈಡೇರಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 2ನೇ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್​ ಪಟ್ಟದ ಸುದ್ದಿಯೊಂದಿಗೆ ಆರ್​ಸಿಬಿ ಸೋಷಿಯಲ್ ಮೀಡಿಯಾದಲ್ಲೂ ಹೊಸ ಇತಿಹಾಸ ನಿರ್ಮಿಸಿದೆ.

1 / 5
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಇನ್​ಸ್ಟಾಗ್ರಾಮ್​ನಲ್ಲಿ ಆರ್​ಸಿಬಿ ಮಾಡಿದ ಪೋಸ್ಟ್​ವೊಂದು ದಾಖಲೆಯ ಲೈಕ್ಸ್​ ಪಡೆದುಕೊಂಡಿದೆ. ಅದು ಕೂಡ ಕೇವಲ 9 ನಿಮಿಷಗಳಲ್ಲಿ ಎಂಬುದು ವಿಶೇಷ.

2 / 5
ಅಂದರೆ ಆರ್​ಸಿಬಿ ತಂಡವು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ಚಾಂಪಿಯನ್ಸ್ ಪೋಸ್ಟ್​ ಅತೀ ಕಡಿಮೆ ಅವಧಿಯಲ್ಲಿ 1 ಮಿಲಿಯನ್ (10 ಲಕ್ಷ) ಲೈಕ್ಸ್ ಪಡೆದುಕೊಂಡಿದೆ. ಇದರೊಂದಿಗೆ ಭಾರತದಲ್ಲಿ ಅತೀ ಕಡಿಮೆ ಸಮಯದಲ್ಲಿ 10 ಲಕ್ಷ ಲೈಕ್ಸ್ ಪಡೆದುಕೊಂಡ ಇನ್​ಸ್ಟಾಗ್ರಾಮ್ ಪೋಸ್ಟ್ ಎಂಬ ದಾಖಲೆ ಆರ್​ಸಿಬಿಯ ಚಾಂಪಿಯನ್ಸ್​ ಫೋಟೋ ಪಾಲಾಗಿದೆ.

3 / 5
ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಫೆಬ್ರವರಿ 20 ರಂದು 2ನೇ ಮಗುವಿನ ಆಗಮನದ ಶುಭಸುದ್ದಿಯನ್ನು ಇನ್​ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದರು. ಈ ಪೋಸ್ಟ್ ಕೇವಲ 10 ನಿಮಿಷಗಳಲ್ಲಿ 10 ಲಕ್ಷ ಲೈಕ್ಸ್ ಪಡೆಯುವ ಮೂಲಕ ಭಾರತದಲ್ಲಿ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ದಾಖಲೆ ಬರೆದಿತ್ತು.

4 / 5
ಇದೀಗ ಆರ್​ಸಿಬಿ ತಂಡವು ಚಾಂಪಿಯನ್ ಪಟ್ಟಕ್ಕೇರಿರುವ ಪೋಸ್ಟ್ ಕೇವಲ 9 ನಿಮಿಷಗಳಲ್ಲಿ 10 ಲಕ್ಷ ಲೈಕ್ಸ್ ಪಡೆದುಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಇನ್​ಸ್ಟಾಗ್ರಾಮ್ ಲೈಕ್ಸ್ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿರುವುದು ವಿಶೇಷ.

5 / 5
Follow us
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್